ಭೈರಸಂದ್ರ ವಾರ್ಡ್ ಮತ್ತು ತಿಲಕ್ ನಗರ ವಾರ್ಡ್ ನ ಅವೈಜ್ಞಾನಿಕ ವಿಂಗಡಣೆ ವಿರೋಧಿಸಿ ಜಯನಗರ ವಿಧಾನಸಭಾ ಕ್ಷೇತ್ರದಲ್ಲಿ ಮೌನ ಪ್ರತಿಭಟನೆ ನಡೆಯಿತು.
ಜಯನಗರ ವಿಧಾನಸಭಾ ಕ್ಷೇತ್ರದ ಈ ವಾರ್ಡ್ ಗಳನ್ನು ಅವೈಜ್ಞಾನಿಕವಾಗಿ ವಿಂಗಡಿಸಿರುವ ರಾಜ್ಯ ಸರ್ಕಾರ ಮತ್ತು ಬಿ.ಬಿ.ಎಂ.ಪಿ. ವಿರುದ್ಧ ಕಾಂಗ್ರೆಸ್ ಮತ್ತು ಸ್ವಯಂಸೇವಾ ಸಂಘಟನೆಗಳು, ಸಾರ್ವಜನಿಕರು ಭೈರಸಂದ್ರ ವಾರ್ಡ್ ನ ಉಷಾ ಅಪಾರ್ಟ್ ಮೆಂಟ್ ಮುಂಭಾಗದಲ್ಲಿ ಬೃಹತ್ ಮೌನ ಪ್ರತಿಭಟನೆ ನಡೆಸಿದರು.
ಕೆ.ಪಿ.ಸಿ.ಸಿ. ಕಾರ್ಯಾಧ್ಯಕ್ಷ ರಾಮಲಿಂಗಾ ರೆಡ್ಡಿ, ಶಾಸಕಿ ಸೌಮ್ಯ ರೆಡ್ಡಿ, ಬಿ.ಬಿ.ಎಂ.ಪಿ. ಸದಸ್ಯರಾದ ಮೊಹಮ್ಮದ್ ರಿಜ್ವಾನ್, ಮಂಜುನಾಥ್ , ಸಮೀವುಲ್ಲ ಮತ್ತು ಸ್ಥಳೀಯರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ನವೀನ್ ʼಪಬ್ಲಿಕ್ ನೆಕ್ಸ್ಟ್ʼ ಬೆಂಗಳೂರು
PublicNext
29/06/2022 08:01 pm