ಪಬ್ಲಿಕ್ ನೆಕ್ಸ್ಟ್ ಇಂಪ್ಯಾಕ್ಟ್
ವರಿದಿ: ಹರೀಶ್ ಆನೇಕಲ್
ಆನೇಕಲ್: ಹೆಂಡತಿ ಅಧಿಕಾರವನ್ನು ಗಂಡ ದುರ್ಬಳಕೆ ಮಾಡಿಕೊಂಡು ದರ್ಪ ತೋರಿದರ ಬಗ್ಗೆ ಇದೇ ತಿಂಗಳು 6 ನೇ ತಾರೀಖಿನಂದು ಪಬ್ಲಿಕ್ ನೆಕ್ಸ್ಟ್ ನಲ್ಲಿ ವಿಸ್ತೃತ ವರದಿ ಮಾಡಿತ್ತು. ಈ ಹಿನ್ನೆಲೆಯಲ್ಲಿಯೇ ಎಚ್ಚೆತ್ತ ತಾಲೂಕು ಕಾರ್ಯನಿರ್ವಹಣಾಧಿಕಾರಿ ಲಕ್ಷ್ಮೀನಾರಾಯಣಸ್ವಾಮಿ, ಆನೇಕಲ್ ಭಾಗದ ಎಲ್ಲಾ ಪಂಚಾಯಿತಿಗಳಿಗೂ ನೋಟಿಸ್ ಜಾರಿ ಮಾಡಿದ್ದಾರೆ.
ಹೌದು. ಕುವೆಂಪುನಗರದ ಗ್ರಾಮ ಪಂಚಾಯಿತಿ ಸದಸ್ಯೆ ಸುಮಿತ್ರಾ ಅವರ ಪತಿ ಸುರೇಶಗೌಡ ಪತ್ನಿಯ ಅಧಿಕಾರ ದುರಪಯೋಗ ಮಾಡಿಕೊಂಡು ದರ್ಪ ತೋರುತ್ತಲೇ ಇದ್ದರು.
ಈ ಬಗ್ಗೆ ನಿಮ್ಮ ಪಬ್ಲಿಕ್ ನೆಕ್ಸ್ಟ್ ವರದಿ ಮಾಡಿತ್ತು. ಅದರ ಪರಿಣಾಮ ಈಗ ತಾಲೂಕು ಕಾರ್ಯನಿರ್ವಹಣಾಧಿಕಾರಿ ಲಕ್ಷ್ಮೀನಾರಾಯಣಸ್ವಾಮಿ ಆನೇಕಲ್ ಭಾಗದ ಎಲ್ಲಾ ಪಂಚಾಯಿತಿಗಳಿಗೂ ನೋಟಿಸ್ ಜಾರಿ ಮಾಡಿದ್ದಾರೆ.
ಈ ಬಗ್ಗೆ ಮಾತನಾಡಿದ ಲಕ್ಷ್ಮಿ ನಾರಾಯಣ ಸ್ವಾಮಿ, ಯಾವುದೇ ಕಾರಣಕ್ಕೂ ಗ್ರಾಮ ಪಂಚಾಯಿತಿಗಳಲ್ಲಿ ಚುನಾಯಿತ ಸದಸ್ಯರು ಮಾತ್ರ ಅಧಿಕಾರವನ್ನು ಚಲಾಯಿಸುವಂತೆ ಅವಕಾಶ ಇದೆ. ಉಳಿದಂತೆ ಯಾವುದೇ ಕಾರಣಕ್ಕೂ ಗಂಡಂದಿರು ಹಸ್ತಕ್ಷೇಪ ಮಾಡಬಾರದು. ಎಲ್ಲಾ ಗ್ರಾಮ ಪಂಚಾಯ್ತಿಗಳಿಗೂ ನೋಟಿಸ್ ಜಾರಿ ಮಾಡಲಾಗಿದೆ. ಮತ್ತೆ ಕುವೆಂಪು ನಗರದಲ್ಲಿ ನಡೆದ ಘಟನೆಯ ಬಗ್ಗೆ ವರದಿ ಸಲ್ಲಿಸುವಂತೆ ಸೂಚನೆ ನೀಡಿದ್ದೇನೆ ಎಂದು ತಿಳಿಸಿದರು.
PublicNext
12/02/2022 08:01 pm