ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ನಾಳೆ ಹಾಡೋನಹಳ್ಳಿ ಗ್ರಾಮದಲ್ಲಿ 'ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ' ಕಾರ್ಯಕ್ರಮ

ದೊಡ್ಡಬಳ್ಳಾಪುರ: ತಾಲೂಕಿನ ಹಾಡೋನಹಳ್ಳಿ ಗ್ರಾಮದಲ್ಲಿ ನಾಳೆ ತಹಶೀಲ್ದಾರ್ ನೇತೃತ್ವದಲ್ಲಿ 'ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ' ಕಾರ್ಯಕ್ರಮ ನಡೆಯಲಿದ್ದು, ಗ್ರಾಮಸ್ಥರ ಸಮಸ್ಯೆಗಳನ್ನ ಸ್ಥಳದಲ್ಲೇ ಪರಿಹರಿಸಲಾಗುವುದು.

ಜನರ ಮನೆ ಬಾಗಿಲಿಗೆ ಆಡಳಿತ ತರುವ ಯೋಜನೆ ಈ 'ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ' ಕಾರ್ಯಕ್ರಮ. ನಾಳೆ ತಾಲೂಕಿನ ಹಾಡೋನಹಳ್ಳಿ ಗ್ರಾಮದಲ್ಲಿ ತಹಶೀಲ್ದಾರ್ ಮೋಹನ್ ಕುಮಾರಿ ನೇತೃತ್ವದಲ್ಲಿ ಈ ಕಾರ್ಯಕ್ರಮ ನಡೆಯಲಿದ್ದು ತಾಲೂಕು ಆಡಳಿತದಿಂದ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.

ಈಗಾಗಲೇ ಗ್ರಾಮಸ್ಥರಿಂದ ಅರ್ಜಿಗಳನ್ನ ಪಡೆಯಲಾಗಿದ್ದು, ನಾಳೆ ನಡೆಯುವ ಕಾರ್ಯಕ್ರಮದಲ್ಲಿ ತಾಲೂಕಿನ ಎಲ್ಲಾ ಅಧಿಕಾರಿಗಳು ಭಾಗವಹಿಸಲಿದ್ದಾರೆ. ಸ್ದಳದಲ್ಲೇ ಜನರ ಸಮಸ್ಯೆಗಳನ್ನ ಪರಿಹಾರಿಸಲಾಗುವುದು. ಹಾಡೋನಹಳ್ಳಿಯ ಕೃಷಿ ವಿಜ್ಞಾನಿ ಕೇಂದ್ರ ರೈತರೊಂದಿಗೆ ಸಂವಾದ ಕಾರ್ಯಕ್ರಮ ಆಯೋಜನೆ ಮಾಡಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಸೌಲಭ್ಯಗಳ ಮಳಿಗೆ, ಸಂಜೆ ನಂತರ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ.

Edited By : Nagesh Gaonkar
Kshetra Samachara

Kshetra Samachara

19/02/2022 10:43 am

Cinque Terre

1.8 K

Cinque Terre

0

ಸಂಬಂಧಿತ ಸುದ್ದಿ