ಆನೇಕಲ್: ಜನಸಾಮಾನ್ಯರ ಸಮಸ್ಯೆಯನ್ನು ಬಗೆಹರಿಸುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿಕಡೆ ಎಂಬ ಸರ್ಕಾರಿ ಕಾರ್ಯಕ್ರಮವನ್ನು ಸರ್ಕಾರ ಕೈಗೊಂಡಿದೆ. ಆದರೆ ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಬಿದರಗುಪ್ಪೆ ಗ್ರಾಮ ಪಂಚಾಯತಿಯಲ್ಲಿ ಜಿಲ್ಲಾಧಿಕಾರಿಗಳು ಗ್ರಾಮ ವಾಸ್ತವ್ಯ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರು. ಆದ್ರೆ ಗ್ರಾಮೋತ್ಸವ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿಗಳು ಗೈರು ಆಗಿದ್ದರು.
ಗ್ರಾಮ ವಾಸ್ತವ್ಯದ ಮೂಲ ಉದ್ದೇಶ ಜನಸಾಮಾನ್ಯರ ಸಮಸ್ಯೆಗಳನ್ನು ಬಗೆಹರಿಸುವುದು. ಆದರೆ ಇದು ಕಾಟಾಚಾರಕ್ಕೆ ಮಾಡಲಾಗಿದೆ ಎನ್ನುವ ಆರೋಪ ಕೇಳಿ ಬಂದಿದೆ. ಈ ಕಾರ್ಯಕ್ರಮದಲ್ಲಿ ಬಹುತೇಕ ಇಲಾಖೆ ಅಧಿಕಾರಿಗಳು ಗೈರಾಗಿದ್ದಾರೆ. ಸಭೆಯಲ್ಲಿ ದಿನೇಶ್ ದಂಡಾಧಿಕಾರಿ ಸೇರಿದಂತೆ ಕೇವಲ ಬೆರಳೆಣಿಕೆಯಷ್ಟು ಅಧಿಕಾರಿಗಳು ಹಾಜರಾಗಿದ್ದರು.
ಹರೀಶ್ ಗೌತಮ್ ನಂದ ಪಬ್ಲಿಕ್ ನೆಕ್ಸ್ಟ್ ಆನೇಕಲ್
Kshetra Samachara
19/03/2022 07:41 pm