ತಮಿಳುನಾಡಿಗೆ ಕಾವೇರಿ ಒಂದು ರಾಜಕೀಯ ದಾಳ. ಸ್ವಾತಂತ್ರ್ಯ ಬಂದಾಗಿನಿಂದ ಕಾವೇರಿ ಹೆಸರಲ್ಲೆ ಅವರು ರಾಜಕಾರಣ ಮಾಡ್ತಿದ್ದಾರೆ ಎಂದು ಮುಖ್ಯಮಂತ್ರಿ ಬೊಮ್ಮಾಯಿ ತಿಳಿಸಿದರು.
ಕಾವೇರಿ ಜಲವಿವಾದ ನ್ಯಾಯ ಮಂಡಲಿ ತೀರ್ಪು ನೀಡಿ ನೀರಿನ ಹಂಚಿಕೆ ಆಗಿದೆ. ನೀರನ್ನು ನೀಡಲು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಇದೆ. ನಮ್ಮ ರಾಜ್ಯದಲ್ಲಿ ಹುಟ್ಟಿರುವ ಕಾವೇರಿ, ಇಲ್ಲಿ ಬಿದ್ದ ಮಳೆಯ ಆಧಾರದ ಮೇಲೆ ನಾವು ಕುಡಿಯುವ ನೀರಿಗಾಗಿ ಮೇಕೆದಾಟು ಯೋಜನೆ ರೂಪಿಸಲಾಗಿದೆ. ಇಷ್ಟೆಲ್ಲಾ ಇದ್ದರೂ ತಮಿಳುನಾಡು ತಕರಾರು ಮಾಡ್ತಿದೆ. ವಿವಿಧ ಅರ್ಜಿಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ.
ರಾಷ್ಟ್ರೀಯ ಹಸಿರು ನ್ಯಾಯ ಮಂಡಲಿ ನಮ್ಮ ಪರವಾಗಿ ಆದೇಶ ನೀಡಿದೆ. ಅದರ ವಿರುದ್ಧ ಸರ್ವೋಚ್ಛ ನ್ಯಾಯಾಲಯದಲ್ಲಿ ಅರ್ಜಿ ಹಾಕಿದ್ದಾರೆ. ಸರ್ವಪಕ್ಷ ಸಭೆ ನಡೆಸಿ ಒಗ್ಗಟ್ಟಿನಿಂದ ಎದುರಿಸಲು ತೀರ್ಮಾನ ಮಾಡಿದ್ದೇವೆ.
Kshetra Samachara
22/03/2022 12:37 pm