ಬೆಂಗಳೂರು: ಬೆಂಗಳೂರಿನ ಮೈಸೂರು ಬ್ಯಾಂಕ್ ವೃತ್ತದಲ್ಲಿ ಪೆಟ್ರೋಲ್ ಡೀಸೆಲ್ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ಖಂಡಿಸಿ ಕೇಂದ್ರ ಸರ್ಕಾರದ ವಿರುದ್ಧ ವಾಟಾಳ್ ನಾಗರಾಜ್ ಮತ್ತು ತಂಡ ರಸ್ತೆಗಿಳಿದು ಪ್ರತಿಭಟನೆ ನಡೆಸಿದರು.
ಮೈಸೂರು ಬ್ಯಾಂಕ್ ವೃತ್ತದಲ್ಲಿ ವಾಟಾಳ್ ನಾಗರಾಜ್ ಕತ್ತೆ ಮೇಲೆ ಗ್ಯಾಸ್ ಸಿಲಿಂಡರ್ ಇಟ್ಟು ಪ್ರತಿಭಟನೆ ನಡೆಸಿದರು. ಪೆಟ್ರೋಲ್ ಡೀಸೆಲ್ ಬೆಲೆ ಇತರರ ದೈನಂದಿನ ಬಳಕೆಯ ವಸ್ತುಗಳ ಮೇಲೆ ಪರಿಣಾಮ ಬೀರುತ್ತದೆ ಮತ್ತು ಬೆಲೆ ಹೆಚ್ಚಾಗುತ್ತದೆ ಆದ್ದರಿಂದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಬೆಲೆಗಳನ್ನು ಕಡಿಮೆ ಮಾಡಬೇಕು ಸರ್ಕಾರ ಕೂಡಲೇ ಬೆಲೆ ಇಳಿಸಬೇಕು ಎಂದು ವಾಟಾಳ್ ನಾಗರಾಜ್ ಹೇಳಿದ್ದಾರೆ. ಹಬ್ಬದ ಮೇಲೆ ಬೆಲೆ ಏರಿಕೆ ಪರಿಣಾಮ ಎಲ್ಲಾ ವಸ್ತುಗಳು ದುಬಾರಿಯಾಗಿವೆ.
ನವೀನ್, ಪಬ್ಲಿಕ್ ನೆಕ್ಸ್ಟ್, ಬೆಂಗಳೂರು
Kshetra Samachara
01/04/2022 05:01 pm