ಕೆ.ಆರ್.ಪುರ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಬೆಂಗಳೂರಿನ ಕೆಆರ್ ಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ರಾಮಮೂರ್ತಿ ನಗರದ ನಾಗಪ್ಪ ಬಡಾವಣೆಗೆ ಭೇಟಿ ಕೊಟ್ಟಿದ್ದಾರೆ. ಮಳೆಯಿಂದ ಹಾನಿಯಾದ ಪ್ರದೇಶಗಳ ಸ್ಥಿತಿ-ಗತಿ ಬಗ್ಗೆ ಪರಿಶೀಲನೆ ನಡೆಸಿದ್ರು.
ಸಿಟಿ ರೌಂಡ್ಸ್ ಗೂ ಮುಂಚೆಯೇ ಮಳೆಯಿಂದಾದ ಸಮಸ್ಯೆಗಳ ಬಗ್ಗೆ ಬಿಬಿಎಂಪಿ ಆಡಳಿತಾಧಿಕಾರಿ, ಪಾಲಿಕೆ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರೊಂದಿಗೆ ಚರ್ಚಿಸಿ ಮಾಹಿತಿ ಪಡೆದಿದ್ದರು.. ಈ ಹಿನ್ನೆಲೆಯಲ್ಲಿ ಸ್ಥಳಗಳಿಗೆ ಭೇಟಿ ನೀಡಿದ ನಂತರ ನೀರು ನುಗ್ಗವ ಸ್ಥಳಗಳಲ್ಲಿ ಏನು ಮಾಡಬೇಕೆಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ರು. ಈ ಸಂದರ್ಭದಲ್ಲಿ ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್, ನಗರಾಭಿವೃದ್ಧಿ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್ ಮತ್ತು ಇತರರು ಉಪಸ್ಥಿತರಿದ್ದರು..
ರಂಜಿತಾಸುನಿಲ್, ಪಬ್ಲಿಕ್ ನೆಕ್ಸ್ಟ್, ಬೆಂಗಳೂರು
PublicNext
20/05/2022 12:23 pm