ದೇವನಹಳ್ಳಿ: ಕರ್ನಾಟಕದಿಂದ ರಾಜ್ಯಸಭೆಗೆ ಎರಡನೇ ಬಾರಿಗೆ ಆಯ್ಕೆಯಾಗಿರುವ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ದೇವನಹಳ್ಳಿ ವಿಮಾನ ನಿಲ್ದಾಣದಲ್ಲಿ ಸ್ವಾಗತ ಕೋರಲಾಯಿತು. ದೆಹಲಿಯಿಂದ ಬಂದ ನಿರ್ಮಲಾ ಸೀತಾರಾಮನ್ ಅವರನ್ನು ಸಂಸದರಾದ ಸದಾನಂದಗೌಡ, ಪಿ.ಸಿ.ಮೋಹನ್, ಯಲಹಂಕ ಶಾಸಕ ವಿಶ್ವನಾಥ್ ಸೇರಿ ನೂರಾರು ಕಾರ್ಯಕರ್ತರು, ಬಿಜೆಪಿ ಪಕ್ಷದ ಮುಖಂಡರು ಹೂಗುಚ್ಛ ನೀಡಿ ಬರಮಾಡಿಕೊಂಡರು.
ದೇವನಹಳ್ಳಿ ವಿಮಾನ ನಿಲ್ದಾಣದಲ್ಲಿ ಸ್ವಾಗತ ಸ್ವೀಕರಿಸಿದ ನಿರ್ಮಲಾ ಸೀತಾರಾಮನ್ ದೇವನಹಳ್ಳಿ ಏರ್‌ಪೋರ್ಟ್‌ನಿಂದ ಬೆಂಗಳೂರಿನತ್ತ ಪ್ರಯಾಣ ಬೆಳೆಸಿದರು. ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಿಜೆಪಿ ಪಕ್ಷದ ನೂರಾರು ಜನ ಕಾರ್ಯಕರ್ತರು ಉತ್ತಮ ಸೇವೆ ಸಲ್ಲಿಸಿದ ನಿರ್ಮಲಾ ಸೀರಾರಾಮನ್‌ಗೆ ಅಭಿನಂದಿಸಿದರು. ಏನೇ ಆಗಲಿ ನಿರ್ಮಲಾ ಸೀತಾರಾಮನ್ ಕೇಂದ್ರ ಸರ್ಕಾರದಲ್ಲಿ ಉತ್ತಮ ಸೇವೆ ಸಲ್ಲಿಸುತ್ತಿದ್ದು, ಬಿಜೆಪಿ ಕಾರ್ಯಕರ್ತರು ಸ್ವಾಗತ ಕೋರಿ ಬರಮಾಡಿಕೊಂಡರು.
Kshetra Samachara
30/05/2022 03:52 pm