ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಕೋರಂ ಇಲ್ಲದ ಕಾರಣ: ವಣಕನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಚುನಾವಣೆ ಮುಂದೂಡಿಕೆ

ಆನೇಕಲ್‌ :ವನಕನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಚುನಾವಣೆ ಹಿನ್ನೆಲೆಯಲ್ಲಿ ಕೊರಂ ಇಲ್ಲದ ಕಾರಣಕ್ಕೆ ಚುನಾವಣೆಯನ್ನು ಮುಂದೂಡಿಕೆ ಮಾಡಲಾಗಿದೆ ಎಂದು ಚುನಾವಣಾ ಅಧಿಕಾರಿಗಳು ತಿಳಿಸಿದರು

ಹೌದು ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ವಣಕನ ಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಇಂದು ಅಧ್ಯಕ್ಷ ಚುನಾವಣೆಯನ್ನು ನಿಗದಿ ಮಾಡಲಾಗಿತ್ತು ಆದರೆ ಚುನಾವಣೆ ಚುನಾಯಿತ ಪ್ರತಿನಿಧಿಗಳು ಗೈರಾದ ಹಿನ್ನೆಲೆಯಲ್ಲಿ ಚುನಾವಣೆಯನ್ನು ಮುಂದೂಡಲಾಗಿದೆ..ಇನ್ನು ಒಟ್ಟು ಹದಿನಾಲ್ಕು ಜನ ಸದಸ್ಯರಿದ್ದು ಅಧ್ಯಕ್ಷ ಸ್ಥಾನಕ್ಕೆ ಶ್ರೀನಿವಾಸ್ ಎಂಬವರು ಕಣದಲ್ಲಿದ್ದರು ಆದರೆ ಎಂಟು ಜನ ಗೈರು ಆದ ಹಿನ್ನೆಲೆಯಲ್ಲಿ ಚುನಾವಣೆಯನ್ನು ಮುಂದೂಡಿಕೆ ಮಾಡಲಾಗಿದೆ.. ಇದೇ ತಿಂಗಳು 24 ನೇ ತಾರೀಕು ಚುನಾವಣೆ ನಡೆಯಲಿದೆ ಎಂದು ತಿಳಿಸಿದರು ಇನ್ನು ಮಾಧ್ಯಮಗಳು ಕಾಂಗ್ರೆಸ್ ಪಕ್ಷದಲ್ಲಿ ಆಂತರಿಕ ಕಚ್ಚಾಟ ಶುರುವಾಗಿದೆ ಎಂಬ ಪ್ರಶ್ನೆಗೆ ಅದಲ್ಲ ಯಾವುದು ಇಲ್ಲ ಸಣ್ಣಪುಟ್ಟ ಗೊಂದಲಗಳಿವೆ ನಮ್ಮ ಹೈಕಮಾಂಡ್ ತೀರ್ಮಾನ ಮಾಡುತ್ತಾರೆ ಪಕ್ಷದಲ್ಲಿ ಚರ್ಚೆ ಮಾಡಿ ಕಾಂಗ್ರೆಸ್ ಬಾವುಟವನ್ನು ಹಾರುಸ್ತಿವಿ ಎಂದು ತಿಳಿಸಿದರು..

Edited By : PublicNext Desk
Kshetra Samachara

Kshetra Samachara

15/06/2022 03:54 pm

Cinque Terre

1.91 K

Cinque Terre

0

ಸಂಬಂಧಿತ ಸುದ್ದಿ