ಆನೇಕಲ್:ಸಿಬಿಐ ಹಾಗೂ ಇಡಿ ಸಂಸ್ಥೆಗಳನ್ನು ಬಿಜೆಪಿ ಸರ್ಕಾರ ದುರ್ಬಳಕೆ ಮಾಡುತ್ತಿದೆ ಅಂತ ಆರೋಪದ ಹಿನ್ನೆಲೆಯಲ್ಲಿ ಆನೇಕಲ್ ಹೆಬ್ಬಗೋಡಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ಮಾಡಿ ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದ್ದಾರೆ
ಹೆಬ್ಬಗೋಡಿ ವ್ಯಾಪ್ತಿಯಲ್ಲಿ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಲಾಯಿತು ಇನ್ನು ಸಿಬಿಐ ಮತ್ತು ಇಡಿ ಸಂಸ್ಥೆಗಳನ್ನು ಬಿಜೆಪಿ ಸರ್ಕಾರ ದುರ್ಬಳಕೆ ಮಾಡುತ್ತಿದ್ದ ಆರೋಪದ ಹಿನ್ನೆಲೆಯಲ್ಲಿ ಪ್ರತಿಭಟನೆ ನಡೆಸುತ್ತಿದ್ದು ಇದರಿಂದ ನಮ್ಮ ನಾಯಕರ ಆತ್ಮಸ್ಥೈರ್ಯ ಕುಗ್ಗುವುದಿಲ್ಲ ನಾವು ಹೋರಾಟ ಮಾಡುತ್ತೇವೆ ಹೆಬ್ಬಗೋಡಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಬಿಜೆಪಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದೆ ಪ್ರತಿಭಟನೆಯಲ್ಲಿ ಕಾಂಗ್ರೆಸ್ ನೂರಾರು ಕಾರ್ಯಕರ್ತರು ಭಾಗಿಯಾಗಿದ್ದರು
Kshetra Samachara
21/06/2022 07:09 pm