ಬೆಂಗಳೂರು: ಇಂದಿನಿಂದ ರಾಜ್ಯಾದ್ಯಂತ ಪೌರಕಾರ್ಮಿಕರು ಅನಿರ್ದಿಷ್ಟಾವಧಿ ಮುಷ್ಕರ ನಡೆಯುತ್ತಿದೆ. ಸ್ವಚ್ಛತಾ ಕಾರ್ಮಿಕರ ಮುಷ್ಕರದಿಂದಾಗಿ ನಗರದಲ್ಲಿ ತ್ಯಾಜ್ಯ ಸಮಸ್ಯೆ ಉಲ್ಬಣಿಸಿದೆ.
ನೇರ ನೇಮಕಾತಿ ಸೇರಿದಂತೆ ಸುರಕ್ಷತಾ ಕವಚಗಳು, ನಿವೃತ್ತಿ ಸೇವಾ ಸೌಲಭ್ಯಗಳು ಮತ್ತು ಇತರ ಕಲ್ಯಾಣ ಸೌಲಭ್ಯಗಳನ್ನ ನೀಡುವಂತೆ ಆಗ್ರಹಿಸಿ ಪೌರ ಕಾರ್ಮಿಕರು ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.
ಕೆಲಸ ಖಾಯಂ ಪೌರಕಾರ್ಮಿಕರ ಪ್ರಮುಖ ಬೇಡಿಕೆಯಾಗಿದೆ. ಸಫಾಯಿ ಕರ್ಮಾಚಾರಿ, ಸ್ವೀಪರ್ ಸೇರಿದಂತೆ ಪೌರಕಾರ್ಮಿಕರಿಗೆ ಮಾಸಿಕ ಸುಮಾರು 14,000 ರೂ. ಅಲ್ಪ ವೇತನ ನೀಡಲಾಗುತ್ತಿದೆ. ಇದರಿಂದ ಮೂಲ ಅಗತ್ಯಗಳನ್ನು ಈಡೇರಿಸುವುದೇ ದುಸ್ತರವಾಗಿ ಪರಿಣಮಿಸಿದೆ. ಹೀಗಾಗಿ, ನೇರ ನೇಮಕಾತಿ ಮಾಡಬೇಕೆಂಬುದು ಪೌರಕಾರ್ಮಿಕ ಒಕ್ಕೂಟ ಬೇಡಿಕೆಯಿಟ್ಟಿದ್ದಾರೆ.
ಸಿದ್ದರಾಮಯ್ಯ ಸರ್ಕಾರದಲ್ಲಿ ಖಾಯಂ ಗೊಳಿಸಲು ಅನುಮೋದನೆ:
ಮಾರ್ಚ್ 2017ರಲ್ಲಿ ಸಿದ್ದರಾಮಯ್ಯ ಸರ್ಕಾರವಿದ್ದಾಗ ಸಂಪುಟ ಸಭೆಯಲ್ಲಿ ಪೌರಕಾರ್ಮಿರನ್ನು ಖಾಯಮಾತಿಗೊಳಿಸುವ ಪ್ರಸ್ತಾವನೆಗೆ ಅನುಮೋದನೆ ನೀಡಲಾಗಿತ್ತು. ಆದರೆ, ಸಿದ್ದರಾಮಯ್ಯ ಸರ್ಕಾರವೇ ಪ್ರಸ್ತಾವನೆಯನ್ನು ಅನುಷ್ಠಾನಗೊಳಿಸಲು ವಿಫಲವಾಯಿತು. ಬಳಿಕ ಬಂದ ಸರ್ಕಾರಗಳು ಈ ನಿಟ್ಟಿನಲ್ಲಿ ಯಾವುದೇ ನಿರ್ಧಾರ ಕೈಗೊಳ್ಳುವ ಗೋಜಿಗೆ ಹೋಗಿಲ್ಲ ಎಂದು ಆಕ್ರೋಶ ಹೊರಹಾಕಿದ್ದಾರೆ.
ಖಾಯಂ ಕಾರ್ಮಿಕರಿಗೆ 40 ರಿಂದ 45 ಸಾವಿರ ವೇತನ:
ಖಾಯಂ ಕಾರ್ಮಿಕರು ಮಾಸಿಕ 40 ರಿಂದ 45 ಸಾವಿರ ವೇತನ ಪಡೆಯುತ್ತಿದ್ದಾರೆ, ಗುತ್ತಿಗೆ ಪೌರಕಾರ್ಮಿಕರು ಕೇವಲ 14,000 ರೂ. ಪಡೆಯುತ್ತಿದ್ದಾರೆ. ಕನಿಷ್ಟ 17,000 ಪೌರಕಾರ್ಮಿಕರನ್ನು ಖಾಯಮಾತಿ ಮಾಡುಬೇಕೆಂಬುದು ಪ್ರತಿಭಟನಾಕಾರ ಬೇಡಿಕೆಯಾಗಿದೆ.
ರಾಜ್ಯ ಸರ್ಕಾರದೊಂದಿಗೆ ಸಂಜೆ ಸಭೆ:
ಆರ್ಥಿಕ ಇಲಾಖೆ ಅನುಮೋದನೆ ನೀಡಿರುವ 5,300 ಮಂದಿ ಪೌರ ಕಾರ್ಮಿಕರ ಹುದ್ದೆಯನ್ನು ಭರ್ತಿ ಮಾಡುವುದು ಹಾಗೂ ನೇರ ಪಾವತಿ ವೇತನ ಪಡೆಯುತ್ತಿರುವ ಪೌರ ಕಾರ್ಮಿಕರ ಸೇವೆಯನ್ನು ಮುಂದಿನ 3 ವರ್ಷಗಳಲ್ಲಿ ಹಂತ ಹಂತವಾಗಿ ಖಾಯಂಗೊಳಿಸಲು ಕ್ರಮ ತೆಗೆದುಕೊಳ್ಳುತ್ತೇವೆ. ಇಂದು ಸಂಜೆ ರಾಜ್ಯ ಸರ್ಕಾರ ಸಭೆ ಕರೆದಿದ್ದು ಬೇಡಿಕೆಗಳಿಗೆ ಸಕಾರಾತ್ಮಕ ಸ್ಪಂದನೆ ಸಿಗಲಿದೆ ಎಂದು ರಾಷ್ಟ್ರೀಯ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷ ಶಂಕರ್ ತಿಳಿಸಿದ್ದಾರೆ.
PublicNext
01/07/2022 03:09 pm