ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಯಾಗಿ ಲತಾ ರವರ ಅಧಿಕಾರ ಸ್ವೀಕಾರ

ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ನೂತನವಾಗಿ ಆರ್.ಲತಾ ರವರು ಜಿಲ್ಲಾಧಿಕಾರಿಯಾಗಿ ನೇಮಕವಾಗಿ ಇಂದು ಜಿಲ್ಲಾಧಿಕಾರಿಗಳ ಕಚೇರಿಗೆ ಆಗಮಿಸಿ ಅಧಿಕಾರ ಸ್ವೀಕರಿಸಿದರು. ಈ ಮೊದಲು ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಆಗಿದ್ದ ಆರ್.ಲತಾ ಅವರು ನಿನ್ನೆಯಷ್ಟೆ ವರ್ಗಾವಣೆಗೊಂಡಿದ್ದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿ ರವರ ಕಚೇರಿಯಲ್ಲಿಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದರು.

ಅಪರ ಜಿಲ್ಲಾಧಿಕಾರಿ ವಿಜಯ.ಈ.ರವಿಕುಮಾರ್ ಅವರು ಹೂಗುಚ್ಛ ನೀಡುವ ಮೂಲಕ ಸ್ವಾಗತಿಸಿದರು. ದೊಡ್ಡಬಳ್ಳಾಪುರ ಉಪ ವಿಭಾಗಾಧಿಕಾರಿ ತೇಜಸ್ ಕುಮಾರ್ , ಬಾಲಕೃಷ್ಣ KAS ಅಧಿಕಾರಿ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ಕಂದಾಯ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.

ಜಿಲ್ಲಾಧಿಕಾರಿ ಲತಾ ರವರು ಈ ಹಿಂದೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಆಗಿಯೂ ಕಾರ್ಯ ನಿರ್ವಹಿಸಿದ್ದರು. CEO ಆಗಿದ್ದ ವೇಳೆ ನೀರಾವರಿ ಇಲಾಖೆಗೆ ಸಂಬಂಧಿಸಿದ ಮುಂದಾಲೋಚನೆಯ ಕೆಲಸಗಳ ಬಗ್ಗೆ ವಸ್ತು ಸ್ಥಿತಿ ಅರಿತು ಕೆಲಸ ಮಾಡುವ ಭರವಸೆ ನೀಡಿದರು.

ಸುರೇಶ್ ಬಾಬು ಪಬ್ಲಿಕ್ ನೆಕ್ಸ್ಟ್..

Edited By : Nagesh Gaonkar
PublicNext

PublicNext

12/07/2022 10:50 pm

Cinque Terre

43.12 K

Cinque Terre

1

ಸಂಬಂಧಿತ ಸುದ್ದಿ