ಬೆಂಗಳೂರು: ದೇವನಹಳ್ಳಿ ಸಮೀಪ ನಂದಿಬೆಟ್ಟ ರಸ್ತೆಯ ಖಾಸಗಿ ರೆಸಾರ್ಟ್‌ನಲ್ಲಿ ನಡೆಯುತ್ತಿರುವ ಬಿಜೆಪಿ ಚಿಂತನಾ ಶಿಬಿರಕ್ಕೆ ಅಗಮಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ. ಸಿಎಂ ಸಭೆಗೆ ಆಗಮಿಸುತ್ತಿದ್ದಂತೆ ಅನೇಕ ನಾಯಕರು ಸಹ ಚಿಂತನಾ ಶಿಬಿರದ ರೆಸಾರ್ಟ್ ಪ್ರವೇಶಿಸಿದರು.
ಶಾಸಕರನ್ನು ಹೊರತುಪಡಿಸಿ ಬೇರೆ ಯಾರಿಗೂ ರೆಸಾರ್ಟ್‌ನಲ್ಲಿ ನಡೆಯುತ್ತಿರುವ ಚಿಂತನಾ ಶಿಬಿರಕ್ಕೆ ಪ್ರವೇಶವಿಲ್ಲ. ಮುಖ್ಯಮಂತ್ರಿಗಳು ಶಿಬಿರದಲ್ಲಿ ಭಾಗಿಯಾಗಿರುವುದರಿಂದ ಪೊಲೀಸರು ಹೆಚ್ಚಿನ ಬಂದೋಬಸ್ತ್ ಕಲ್ಪಿಸಿದ್ದಾರೆ.
PublicNext
15/07/2022 11:27 am