ಬೆಂಗಳೂರು: "ಸಿದ್ದರಾಮಯ್ಯ ಮತ್ತು ಡಿಕೆಶಿ ಅವರು ನಾನೊಂದು ತೀರ, ನೀನೊಂದು ತೀರವಾಗಿದ್ದಾರೆ. ಮೊದಲು ಅವರ ತಟ್ಟೆಯಲ್ಲಿ ಏನಿದೆ? ಎಂದು ನೋಡಿಕೊಳ್ಳಲಿ. ಆಮೇಲೆ ಮತ್ತೊಬ್ಬರ ತಟ್ಟೆಯಲ್ಲಿರುವುದನ್ನು ಗಮನಿಸಲಿ" ಡಿ.ಕೆ.ಶಿವಕುಮಾರ್ ಅವರ ಹೇಳಿಕೆಗೆ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯಿಸಿದ್ದಾರೆ.
ಡಿ.ಕೆ.ಶಿವಕುಮಾರ್ ಅವರಿಗೆ ತಾವು ಮುಖ್ಯಮಂತ್ರಿಯಾಗಬೇಕೆಂಬುದು ಬಹಳ ವರ್ಷಗಳ ಕನಸು. ಕೆಪಿಸಿಸಿ ಅಧ್ಯಕ್ಷರಾಗಿಯೇ ಅವರು ಸರಿಯಾಗಿ ಕೆಲಸ ಮಾಡಲು ಕಾಂಗ್ರೆಸ್ ಬಿಡುತ್ತಿಲ್ಲ. ಇನ್ನು ಸಿಎಂ ಆದ್ರೆ ಹೇಗೆ ಕೆಲಸ ಮಾಡ್ತಾರೆ? ಎಂದು ಪ್ರಶ್ನಿಸಿದ ಬೊಮ್ಮಾಯಿ, "ಏನು ನಡೆಯುತ್ತಿದೆ ಎಂದು ನಾವು ಪ್ರತಿದಿನ ಗಮನಿಸುತ್ತಿದ್ದೇವೆ" ಎಂದರು.
ವರದಿ: ರಂಜಿತಾ ಸುನಿಲ್, ಪಬ್ಲಿಕ್ ನೆಕ್ಸ್ಟ್ ಬೆಂಗಳೂರು
PublicNext
20/07/2022 07:06 pm