ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಕಾಂಗ್ರೆಸ್ ಧರಣಿ ಬಿಸಿ; ವಾಹನ ಸವಾರರು ಹೈರಾಣ

ವರದಿ: ಗೀತಾಂಜಲಿ

ಬೆಂಗಳೂರು: ಇ.ಡಿ. ಸಂಸ್ಥೆಯನ್ನು ದುರ್ಬಳಕ್ಕೆ ಮಾಡಿಕೊಂಡು ಸೋನಿಯಾ ಗಾಂಧಿಗೆ ನೋಟಿಸ್ ನೀಡಲಾಗಿದೆ ಎಂದು ಕಾಂಗ್ರೆಸ್ ಕಾರ್ಯಕರ್ತರು ಇಂದು ಫ್ರೀಡಂ ಪಾರ್ಕ್ ನಲ್ಲಿ ಧರಣಿ ನಡೆಸುತ್ತಿದ್ದಾರೆ.

ಧರಣಿಯಲ್ಲಿ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಸೇರಿದಂತೆ ಅನೇಕ ಕಾಂಗ್ರೆಸ್ ಕಾರ್ಯಕರ್ತರು ಕೂಡ ಭಾಗಿಯಾಗಿ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಆದ್ರೆ, ಇವರು ನಡೆಸ್ತಿರುವ ಪ್ರತಿಭಟನಾ ಧರಣಿಯಿಂದ ವಾಹನ ಸವಾರರು ಹೈರಾಣಾಗಿದ್ದಾರೆ.

ಫ್ರೀಡಂ ಪಾರ್ಕ್ ನಿಂದ ಶುರುವಾದ ಧರಣಿ ರಾಜ ಭವನದ ವರೆಗೂ ಸಾಗಿತ್ತು. ಪ್ರತಿಭಟನೆ ನಿಭಾಯಿಸಲು ಪೊಲೀಸರು ಒಂದು ಕಡೆ ಹರಸಾಹಸ ಪಡುತ್ತಿದ್ದರೆ ಮತ್ತೊಂದು ಕಡೆ ವಾಹನ ಸವಾರರು ಬದಲಿ ಮಾರ್ಗದ ಮೂಲಕ ಹೋಗಬೇಕಾಗಿ ಬಂದು ಸಾಕಷ್ಟು ಸಮಯ ವ್ಯರ್ಥವಾಗಿದೆ. ಇನ್ನು, "ಇವರಿಗೆ ಮಾಡಲು ಬೇರೆ ಕೆಲಸ ಇಲ್ಲ" ಅಂತಾ ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ವಾಹನ ಸವಾರರು ಅಸಮಾಧಾನ ಹೊರ ಹಾಕ್ತಿದ್ದಾರೆ.

Edited By :
Kshetra Samachara

Kshetra Samachara

21/07/2022 05:02 pm

Cinque Terre

2.26 K

Cinque Terre

0

ಸಂಬಂಧಿತ ಸುದ್ದಿ