ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಶಿಕ್ಷಣ ಇಲಾಖೆ ಜವಾಬ್ದಾರಿ ವಹಿಸಿ ಒಂದು ವರ್ಷ: ಪ್ರಗತಿ ಬಗ್ಗೆ ಮಾಹಿತಿ ಹಂಚಿಕೊಂಡ ಬಿ.ಸಿ.ನಾಗೇಶ್

ಬೆಂಗಳೂರು: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಸಕಾಲ ಇಲಾಖೆಯ ಜವಾಬ್ದಾರಿ ವಹಿಸಿಕೊಂಡು ಒಂದು ವರ್ಷ ಪೂರ್ಣಗೊಂಡಿದ್ದು, ಇಲಾಖೆಯಲ್ಲಿ ಸುಧಾರಣೆ, ಬದಲಾವಣೆ, ಅಭಿವೃದ್ಧಿಗಾಗಿ ಪ್ರಾಮಾಣಿಕ ಪ್ರಯತ್ನ ಮಾಡಿದ್ದೇನೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಹಾಗೂ ಸಕಾಲ ಸಚಿವರಾದ ಬಿ.ಸಿ.ನಾಗೇಶ್ ತಿಳಿಸಿದರು.

ಶಿಕ್ಷಣ ಇಲಾಖೆಯ ಜವಾಬ್ದಾರಿ ವಹಿಸಿಕೊಂಡು ಆಗಸ್ಟ್ 7ಕ್ಕೆ ‘ಒಂದು ವರ್ಷ’ ಪೂರ್ಣಗೊಂಡಿದೆ. ಈ ಹಿನ್ನೆಲೆಯಲ್ಲಿ ಇಲಾಖೆಯಲ್ಲಿ ಆಗಿರುವ ಪ್ರಗತಿಯ ಮಾಹಿತಿಯನ್ನು ಸಚಿವರು ಹಂಚಿಕೊಂಡಿದ್ದಾರೆ.

ಶಿಕ್ಷಣ ಇಲಾಖೆಯ ಪ್ರಗತಿಯ ಮಾಹಿತಿ

• ದೇಶದ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ ಮತ್ತು ಸುಧಾರಣೆ ತರಲಿರುವ ‘ರಾಷ್ಟ್ರೀಯ ಶಿಕ್ಷಣ ನೀತಿ-2020’ನ್ನು ರಾಜ್ಯದಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ.

•ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ ನೀಗಿಸಲು 15 ಸಾವಿರ ಶಿಕ್ಷಕರ ನೇಮಕ

•ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ 8,101 ಕೊಠಡಿ ನಿರ್ಮಾಣ ಕಾರ್ಯ.

• ಅತಿಥಿ ಉಪನ್ಯಾಸಕರ ಗೌರವ ಸಂಭಾವನೆಯನ್ನು 3,000 ರೂ. ಗೆ ಹೆಚ್ಚಳ‌

• ಅತಿಥಿ ಶಿಕ್ಷಕರ ಗೌರವ ಸಂಭಾವನೆ 2,500 ರೂ. ಹೆಚ್ಚಳ

• ಅಕ್ಷರ ದಾಸೋಹ ಬಿಸಿಯೂಟ ನೌಕರರ ಗೌರವ ಸಂಭಾವನೆ 1 ಸಾವಿರ ರೂ. ಹೆಚ್ಚಳ

• 2022-23ನೇ ಸಾಲಿನಲ್ಲಿ 32,159 ಅತಿಥಿ ಶಿಕ್ಷಕರ ಸೇವೆಯನ್ನು ಪಡೆಯಲಾಗುತ್ತಿದೆ.

• 2022-23ನೇ ಸಾಲಿನಲ್ಲಿ ಪಿಯು ಕಾಲೇಜುಗಳಿಗೆ 3,708 ಅತಿಥಿ ಉಪನ್ಯಾಸಕರ ಸೇವೆಯನ್ನು ಪಡೆಯಲಾಗುತ್ತಿದೆ.

• 1 ರಿಂದ 8ನೇ ತರಗತಿಯ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟದ ಜೊತೆಗೆ ಮೊಟ್ಟೆ/ಬಾಳೆಹಣ್ಣು/ಚಿಕ್ಕಿ ವಿತರಣೆಗೆ ಕ್ರಮ

• ಸರ್ಕಾರಿ ಶಾಲೆಗಳಿಗೆ ಮಕ್ಕಳನ್ನು ಕರೆದೊಯ್ಯಲು ಶಾಲಾ ವಾಹನ ಖರೀದಿಗೆ 'ಶಾಸಕರ ಪ್ರದೇಶಾಭಿವೃದ್ಧಿ ನಿಧಿ' ಬಳಸಿಕೊಳ್ಳಲು ಅನುಮತಿಸಲಾಗಿದೆ.

• ಮುಂಬಡ್ತಿಗೆ ಸಂಬಂಧಿಸಿದಂತೆ ಸರ್ಕಾರಿ ಶಾಲೆಗಳ ಶಿಕ್ಷಕರ ಹಲವು ವರ್ಷಗಳ ಬೇಡಿಕೆ ಈಡೇರಿಸಲಾಗಿದೆ.

• ಸರ್ಕಾರಿ ಪಿಯು ಕಾಲೇಜುಗಳಿಗೆ ವಿದ್ಯಾರ್ಥಿನಿಯರ ದಾಖಲಾತಿ ಶುಲ್ಕ ಪಾವತಿಯಿಂದ ಸಂಪೂರ್ಣ ವಿನಾಯಿತಿ ನೀಡಲಾಗಿದೆ.

• ಕೌನ್ಸಿಲಿಂಗ್ ಮೂಲಕ 23 ಸಾವಿರಕ್ಕೂ ಹೆಚ್ಚು ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಪೂರ್ಣಗೊಳಿಸಲಾಗಿದೆ.

• ಪ್ರಾಥಮಿಕ ಶಾಲೆಗಳ ಶಿಕ್ಷಕರಿಗೆ ಅವರ ಸೇವಾನುಭವದ ಆಧಾರದ ಮೇಲೆ ಮುಂಬಡ್ತಿ ಬೇಡಿಕೆ ಈಡೇರಿಸಲಾಗುತ್ತಿದೆ.

• ಅನುದಾನಿತ ಶಾಲೆಗಳಲ್ಲಿ 2015ರ ಡಿಸೆಂಬರ್ 31ರ ಪೂರ್ವದಲ್ಲಿ ಖಾಲಿಯಾಗಿರುವ ಬೋಧಕರ ಹುದ್ದೆಗಳ ಭರ್ತಿಗೆ ಅನುಮತಿ‌ ನೀಡಲಾಗಿದೆ. ಎರಡು ಸಾವಿರಕ್ಕೂ ಹೆಚ್ಚು ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಸಾಧ್ಯವಾಗಲಿದೆ.

• ‘ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ’ಯನ್ನು ‘ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ’ ಎಂದು ಮರುನಾಮಕರಣ.

• ಖಾಸಗಿ ಶಾಲೆಗಳ ಕಟ್ಟಡಗಳ ಸುರಕ್ಷತೆ ಮತ್ತು ಅಗ್ನಿ ಸುರಕ್ಷತೆ ಪ್ರಕ್ರಿಯೆ ಸರಳೀಕರಿಸಲಾಗಿದೆ‌.

• ಸರ್ಕಾರಿ ಶಾಲೆಗಳ ಆಸ್ತಿ ಸಂರಕ್ಷಣೆಗಾಗಿ ಇದೇ ಆಗಸ್ಟ್ನಿಂದ ಅಕ್ಟೋಬರ್‌ವರೆಗೆ ವಿಶೇಷ ಅಭಿಯಾನ‌ ಮಾಡಲಾಗುತ್ತಿದೆ.

• ರಾಜ್ಯದ ಎಲ್ಲ ಗ್ರಂಥಾಲಯಗಳನ್ನು ಆಫ್‌ಲೈನ್ ಜೊತೆಗೆ ಆನ್‌ಲೈನ್‌ನಲ್ಲೂ ಲಭ್ಯವಿರುವಂತೆ, ಡಿಜಿಟಲೀಕರಣಗೊಳಿಸುವ ಉದ್ದೇಶವಿದೆ.

• ವರ್ಷಕ್ಕೆ ಎರಡು ಟಿಇಟಿ ಪರೀಕ್ಷೆ ನಡೆಸಬೇಕು ಎನ್ನುವ ಗುರಿ ಇದೆ.

• ಸರ್ಕಾರಿ ಕನ್ನಡ ಮಾಧ್ಯಮ ಶಾಲೆಗಳಲ್ಲಿನ ಮಕ್ಕಳಿಗೆ ‘ಸ್ಪೋಕನ್ ಇಂಗ್ಲೀಷ್’ ತರಗತಿಗಳನ್ನು ಆರಂಭಿಸುವ ಉದ್ದೇಶವಿದೆ ಎಂದು ಶಿಕ್ಷಣ ಸಚಿವ ನಾಗೇಶ್ ಮಾಹಿತಿ ಹಂಚಿಕೊಂಡಿದ್ದಾರೆ.

ಇನ್ನು ದೇಶದಲ್ಲೇ ಮೊದಲು ‘ಕಲಿಕಾ ಚೇತರಿಕೆ’ ಕಾರ್ಯಕ್ರಮ ಅನುಷ್ಠಾನಗೊಳಿಸಲಾಗುತ್ತಿದ್ದು, ಕೇಂದ್ರ ಸರ್ಕಾರದಿಂದ ಮೆಚ್ಚುಗೆ ವ್ಯಕ್ತವಾಗಿದೆ. ಕಲಿಕಾ ಚೇತರಿಕೆ ಕಾರ್ಯಕ್ರಮ ದೇಶಕ್ಕೆ ಮಾದರಿಯಾಗಿದೆ ಎಂದು ಕೇಂದ್ರ ಸಚಿವರಾದ ಧರ್ಮೇಂದ್ರ ಪ್ರಧಾನ್ ಅವರು ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ.

Edited By : Manjunath H D
PublicNext

PublicNext

08/08/2022 07:34 pm

Cinque Terre

24.62 K

Cinque Terre

0

ಸಂಬಂಧಿತ ಸುದ್ದಿ