ಬೆಂಗಳೂರು: ಮಹದೇವಪುರದ ಶಾಸಕರ ಕಚೇರಿಯಲ್ಲಿ ಸ್ಲಂ ಬೋರ್ಡ್ ವತಿಯಿಂದ ಹಮ್ಮಿಕೊಂಡಿದ್ದ ದೇವರಬೀಸನಹಳ್ಳಿ ಹಾಗೂ ಪಣತ್ತೂರು ದಿಣ್ಣೆಯ ಫಲಾನುಭವಿಗಳಿಗೆ ಮನೆಗಳ ಹಕ್ಕುಪತ್ರಗಳನ್ನು ವಿತರಣೆ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ವತಿಯಿಂದ ಹಮ್ಮಿಕೊಂಡಿದ್ದ ಚೆಕ್ ವಿತರಣೆ ಕಾರ್ಯಕ್ರಮವನ್ನು ಶಾಸಕ ಅರವಿಂದ ಲಿಂಬಾವಳಿ ಉದ್ಘಾಟಿಸಿದರು.
ಬಳಿಕ ಮಾತನಾಡಿದ ಅವರು ಪೂರ್ವಜರ ನಿರಂತರ ಹೋರಾಟದ ಫಲವಾಗಿ 1947 ರಲ್ಲಿ ಸ್ವಾತಂತ್ರ್ಯ ದೊರೆತಿದ್ದು, ಸ್ವಾತಂತ್ರ್ಯ ದೊರೆತು ಎಪ್ಪತ್ತೈದು ವರ್ಷಗಳ ಸ್ಮರಣಾರ್ಥವಾಗಿ ರಾಜ್ಯ ಸರ್ಕಾರವು ಸಾಕಷ್ಟು ಜನಸ್ನೇಹಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ ಎಂದರು.
ಇಡೀ ರಾಜ್ಯದಲ್ಲಿ 75,000 ಸ್ತ್ರೀಶಕ್ತಿ ಸಂಘಗಳನ್ನು ಗುರುತಿಸಲಾಗಿದ್ದು ಅದರಲ್ಲಿ ಮಹದೇವಪುರ ಕ್ಷೇತ್ರದಲ್ಲಿ 20 ಸ್ತ್ರೀಶಕ್ತಿ ಸಂಘಗಳು ಸೇರಿವೆ ಎಂದು ತಿಳಿಸಿದರು. ಎಲ್ಲಾ ಸ್ತ್ರೀಶಕ್ತಿ ಸಂಘಗಳಿಗೆ ತಲಾ ಒಂದು ಲಕ್ಷ ರೂಪಾಯಿಗಳ ಬೀಜ ಧನ ಒದಗಿಸಲಾಗುತ್ತಿದ್ದು, ಇದಕ್ಕಾಗಿ ಒಟ್ಟು 75 ಕೋಟಿ ಹಣ ಮೀಸಲಿಡಲಾಗಿದೆ ಎಂದು ಹೇಳಿದರು.
ಇದನ್ನು ಎಲ್ಲರೂ ಸದುಪಯೋಗಪಡಿಸಿಕೊಳ್ಳಬೇಕು ಎಂದು ಶಾಸಕ ಅರವಿಂದ ಲಿಂಬಾವಳಿ ಮನವಿ ಮಾಡಿದರು.
Kshetra Samachara
11/08/2022 09:46 pm