ಬೆಂಗಳೂರು: ಎಸಿಬಿ ರದ್ದಾಗಿ ಲೋಕಾಯುಕ್ತಕ್ಕೆ ಮತ್ತೆ ಬಲ ಸಿಗುತ್ತಿದ್ದಂತೆ ಎಲ್ಲೆಡೆ ಸಂಭ್ರಮ ಮನೆಮಾಡಿದೆ. ಇಂದು ಲೋಕಾಯುಕ್ತ ಕಚೇರಿಯ ಆವರಣದಲ್ಲಿ ಕೇಕ್ ಕತ್ತರಿಸಿ ಸಿಹಿ ಹಂಚುವ ಮೂಲಕ ಆಮ್ ಆದ್ಮಿ ಪಕ್ಷದ ಮುಖಂಡರು ಸಂಭ್ರಮಾಚರಣೆ ನಡೆಸಿದರು. ಆಮ್ ಆದ್ಮಿ ಪಕ್ಷದ ಪೃಥ್ವಿ ರೆಡ್ಡಿ, ಮುಖ್ಯಮಂತ್ರಿ ಚಂದ್ರು, ನಿವೃತ್ತ ಕೆಎಎಸ್ ಅಧಿಕಾರಿ ಮಥಾಯ್ ಸೇರಿ ಐವತ್ತಕ್ಕೂ ಹೆಚ್ಚು ಮುಖಂಡರು ಹಾಗೂ ಕಾರ್ಯಕರ್ತರು ಸಿಹಿ ಹಂಚುವ ಮೂಲಕ ಸಂತಸ ವ್ಯಕ್ತಪಡಿಸಿದರು.
ಇದೇ ಸಂದರ್ಭದಲ್ಲಿ ಮಾತನಾಡಿದ ಆಮ್ ಆದ್ಮಿ ಪಕ್ಷದ ಮುಖಂಡ ಮುಖ್ಯಮಂತ್ರಿ ಚಂದ್ರು, 'ಈ ಹಿಂದೆ ಇದ್ದಂತಹ ಲೋಕಾಯುಕ್ತರಾಗಿದ್ದ ವೆಂಕಟಾಚಲ ಹಾಗೂ ಸಂತೋಷ್ ಹೆಗ್ಡೆ ಅವರು ಭ್ರಷ್ಟರಿಗೆ ಚಾಟಿ ಏಟು ನೀಡಿದ್ದರು. ಬಿ.ಎಸ್.ಯಡಿಯೂರಪ್ಪ, ಕಟ್ಟಾ ಸುಬ್ರಹ್ಮಣ್ಯ ನಾಯ್ಡು, ಅವರ ಪುತ್ರ, ಸಚಿವ ಆನಂದ್ ಸಿಂಗ್ ಸೇರಿದಂತೆ ಹಲವರು ಜೈಲು ಸೇರಿದ್ದರು. ನಂತರದ ದಿನಗಳಲ್ಲಿ ಅದರ ಪವರ್ ಅನ್ನು ಕಿತ್ತುಕೊಂಡು ಎಸಿಬಿ ಎಂದು ಮಾಡಲಾಯ್ತು' ಎಂದರು.
ಇನ್ನು ಇದೇ ಸಂದರ್ಭದಲ್ಲಿ ಲೋಕಾಯುಕ್ತ ಕಚೇರಿ ಮುಂದೆ ಇರುವ ಧ್ವಜ ಸ್ತಂಭವನ್ನು ಸ್ವಚ್ಛಗೊಳಿಸುವ ಕಾರ್ಯವನ್ನ ಆಪ್ ಕಾರ್ಯಕರ್ತರು ಮಾಡಿದ್ದರು. ಸದ್ಯ ಲೋಕಾಯುಕ್ತಕ್ಕೆ ಬಲ ಬಂದಿರುವುದರಿಂದ ಎಲ್ಲೆಡೆ ಸಂತಸ ವ್ಯಕ್ತವಾಗುತ್ತಿದೆ.
PublicNext
12/08/2022 03:01 pm