ಬೆಂಗಳೂರು: ಭವ್ಯ ಭಾರತ ಕಟ್ಟಲು ಯುವಜನತೆ ಸನ್ನದ್ಧರಾಗಬೇಕು. ದೇಶ ಮೊದಲು, ದೇಶದ ನಂತರ ನಾವೆಲ್ಲರೂ ಎಂಬುದನ್ನು ಪ್ರತಿಪಾದಿಸಬೇಕು. ಸಂಕುಚಿತ , ಸ್ವಾರ್ಥ ಮನೋಭಾವನೆಯನ್ನು ತೊರೆದು, ದೇಶಕ್ಕಾಗಿ ನಿಲ್ಲುವ ಕರ್ತವ್ಯ ನಮ್ಮೆಲ್ಲರದ್ದಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಯುವಜನತೆಗೆ ಕರೆ ನೀಡಿದರು.
ಅವರು ಇಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ವಿಧಾನಸೌಧದ ಬೃಹತ್ ಮೆಎಟ್ಟಿಲುಗಳ ಮುಂಭಾಗದಲ್ಲಿ ಆಯೋಜಿಸಿದ್ದ ಸ್ವಾತಂತ್ರ್ಯ ಅಮೃತ ಮಹೋತ್ಸವ ಅಂಗವಾಗಿ ಹರ್ ಘರ್ ತಿರಂಗಾ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು.
ಸ್ವಾತಂತ್ರ್ಯಪೂರ್ವದಲ್ಲಿ ಜನರು ದೇಶಕ್ಕಾಗಿ ಪ್ರಾಣ ಕೊಡುತ್ತಿದ್ದರು. ಈಗ ದೇಶಕ್ಕಾಗಿ ಬದುಕಿ, ದುಡಿಯಬೇಕು. ಭವ್ಯ ಭಾರತದ ನಿರ್ಮಾಣದಲ್ಲಿ ಯುವಕರು ತಮ್ಮ ದುಡಿಮೆಯ ಮೂಲಕ ಪಾಲನ್ನು ನೀಡಬೇಕು. ಇನ್ನು ಮುಂದಿನ 25 ವರ್ಷಗಳ ಕಾಲ ದೇಶಕ್ಕಾಗಿ ನಾನೇನು ಮಾಡಿದ್ದೇನೆ ಎಂಬುದಕ್ಕೆ ಉತ್ತರ ಕಂಡುಕೊಳ್ಳಬೇಕಾಗಿದೆ. ಯುವಕರೆಂದರೆ ಶಕ್ತಿ, ಯುವಕರೆಂದರೆ ಭವಿಷ್ಯ.
ನಮ್ಮ ನಾಡಿಗೆ ನವಕರ್ನಾಟಕದಿಂದ ನವಭಾರತ ನಿರ್ಮಾಣ ಮಾಡಬೇಕಿದೆ. ಪ್ರಧಾನಮಂತ್ರಿಗಳು 5 ಟ್ರಿಲಿಯನ್ ಡಾಲರ್ ಆರ್ಥಿಕತೆಯ ಸಂಕಲ್ಪ ಮಾಡಿದ್ದು, ಅದಕ್ಕೆ ಕರ್ನಾಟಕದಿಂದ 1 ಟ್ರಿಲಿಯನ್ ಡಾಲರ್ ಆರ್ಥಿಕತೆಯ ಕೊಡುಗೆಯನ್ನು ನೀಡುವ ಗುರಿ ಇದೆ ಎಂದರು.
PublicNext
13/08/2022 03:47 pm