ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ದೊಡ್ಡಬಳ್ಳಾಪುರ ಜಿಲ್ಲಾ ಕೇಂದ್ರ ಘೋಷಿಸಲು ಒತ್ತಾಯಿಸಿ ಪ್ರತಿಭಟನೆ

ದೊಡ್ಡಬಳ್ಳಾಪುರ: ಬಿಜೆಪಿ ರಾಜ್ಯ ಸರ್ಕಾರದ ಜನಸ್ಪಂದನ ಕಾರ್ಯಕ್ರಮಕ್ಕೆ ಕಪ್ಪು ಬಾವುಟ ಪ್ರದರ್ಶನ ಮಾಡಲಾಗಿದೆ, ದೊಡ್ಡಬಳ್ಳಾಪುರ ಜಿಲ್ಲಾ ಕೇಂದ್ರ ಘೋಷಣೆ ಮಾಡುವಂತೆ ಒತ್ತಾಯಿಸಿ ದೊಡ್ಡಬಳ್ಳಾಪುರ ನಾಗರಿಕರು ಹೋರಾಟ ಮಾಡುತ್ತಿದ್ದಾರೆ.

ದೊಡ್ಡಬಳ್ಳಾಪುರ ನಗರದ ಎಪಿಎಂಪಿ ವರ್ತಕರು ಇಂದು ಕಪ್ಪು ಬಾವುಟ ಪ್ರದರ್ಶನ ಮಾಡುವ ಮೂಲಕ ಜನಸ್ಪಂದನ ಕಾರ್ಯಕ್ರಮಕ್ಕೆ ತಮ್ಮ ಆಕ್ರೋಶ ವ್ಯಕ್ತಪಡಿಸಿದರು, ಬೆಂಗಳೂರು ಗ್ರಾಮಾಂತರ ಜಿಲ್ಲಾ ಕೇಂದ್ರವನ್ನ ದೊಡ್ಡಬಳ್ಳಾಪುರ ನಗರವನ್ನ ಘೋಷಣೆ ಮಾಡಬೇಕೆಂಬುದು ಹೋರಾಟಗಾರರ ಒತ್ತಾಯವಾಗಿದೆ. ದೊಡ್ಡಬಳ್ಳಾಪುರದಲ್ಲಿ ನಡೆಯುವ ಜನಸ್ಪಂದನ ಕಾರ್ಯಕ್ರಮಕ್ಕೆ ಕಪ್ಪು ಬಾವುಟ ಪ್ರದರ್ಶನ ಮಾಡುವ ಎಚ್ಚರಿಕೆ ನೀಡಿದ ಹೋರಾಟಗಾರರು ಇಂದು ಬೆಳಗ್ಗೆ ಎಪಿಎಂಸಿ ಮಾರುಕಟ್ಟೆಯಲ್ಲಿ ಕಪ್ಪು ಬಾವುಟ ಮತ್ತು ಕಪ್ಪು ಬಟ್ಪೆ ಪ್ರದರ್ಶಿಸುವ ಮೂಲಕ ಎಚ್ಚರಿಕೆ ನೀಡಿದರು.

ದೊಡ್ಡಬಳ್ಳಾಪುರ ಜಿಲ್ಲಾ ಕೇಂದ್ರ ಹೋರಾಟ ಸಮಿತಿ ಇಂದು ಕರಾಳೋತ್ಸವಕ್ಕೆ ಕರೆ ನೀಡಿದೆ. ಜಿಲ್ಲಾ ಕೇಂದ್ರಕ್ಕೆ ಒತ್ತಾಯಿಸಿ ಇಂದು ಬೆಳಗ್ಗೆ 9:30ಕ್ಕೆ ನಗರದ ಕನ್ನಡ ಜಾಗೃತ ಭವನದಿಂದ ಬೃಹತ್ ಜಾಥಾ ಹೊರಡಲಿದೆ. ಜಗದೀಶ್ ವೃತ್ತದಲ್ಲಿ ಪ್ರತಿಭಟನೆ ಮಾಡುವ ಮೂಲಕ ಕರಾಳೋತ್ಸವ ಆಚರಣೆ ಮಾಡಲಿದೆ. ಜಗದೀಶ್ ವೃತ್ತದಲ್ಲಿ ಪ್ರತಿಭಟನೆ ಮಾಡಲು ಪೊಲೀಸ್ ಇಲಾಖೆ ಅವಕಾಶ ನೀಡಿಲ್ಲ. ಆದರೆ ಪ್ರತಿಭಟನೆಕಾರರು ಪ್ರತಿಭಟನೆ ಮಾಡುವ ಎಚ್ಚರಿಕೆ ನೀಡಿದ್ದಾರೆ.

Edited By :
PublicNext

PublicNext

10/09/2022 11:29 am

Cinque Terre

24.98 K

Cinque Terre

0

ಸಂಬಂಧಿತ ಸುದ್ದಿ