ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮರಸೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನ ಬಿಜೆಪಿ ತೆಕ್ಕೆಗೆ

ಆನೇಕಲ್ : ಮರಸೂರು ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿದ್ದ ಸರಿತಾ ವೆಂಕಟಸ್ವಾಮಿ ಮತ್ತು ಉಪಾಧ್ಯಕ್ಷರಾಗಿದ್ದ ವೆಂಕಟಸ್ವಾಮಿರೆಡ್ಡಿ ಅವರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಶುಕ್ರವಾರ ಚುನಾವಣೆ ನಿಗದಿಯಾಗಿತ್ತು. ಚುನಾವಣೆಯಲ್ಲಿ ಮಂಜುಳ ಸೋಮಶೇಖರ್‌ ಅಧ್ಯಕ್ಷರಾಗಿ ಮತ್ತು ಉಪಾಧ್ಯಕ್ಷರಾಗಿ ಕೃಷ್ಣಪ್ಪ ನಾಗಪ್ಪ ಆಯ್ಕೆಯಾದರು.

ನೂತನ ಅಧ್ಯಕ್ಷೆ ಮಂಜುಳ ಸೋಮಶೇಖರ್‌ ಮಾತನಾಡಿ ಮರಸೂರು ಗ್ರಾಮ ಪಂಚಾಯಿತಿಯನ್ನು ರಾಜ್ಯದಲ್ಲಿಯೇ ಉತ್ತಮ ಗ್ರಾಮ ಪಂಚಾಯಿತಿಯನ್ನಾಗಿ ರೂಪಿಸಲು ಶ್ರಮಿಸಲಾಗುವುದು. ಗ್ರಾಮ ಪಂಚಾಯಿತಿಯ ಆದಾಯವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಶ್ರಮಿಸಲಾಗುವುದು. ತೆರಿಗೆ ವಸೂಲಾತಿ ಸೇರಿದಂತೆ ಎಲ್ಲಾ ಯೋಜನೆಯನ್ನು ಪಾರದರ್ಶಕವಾಗಿ ಕ್ರಮ ಕೈಗೊಳ್ಳಲಾಗುವುದು ಎಂದರು.

ನೂತನ ಅಧ್ಯಕ್ಷ ಮತ್ತು ಉಪಾಧ್ಯಕ್ಷರನ್ನು ಮುಖಂಡರಾದ ಕೆ.ಶಿವರಾಮು, ಬಂಡಾಪುರ ರಾಮಚಂದ್ರ, ಬಿಜೆಪಿ ಮಂಡಲ ಅಧ್ಯಕ್ಷ ಮುನಿರಾಜು ಗೌಡ, ಜಿಲ್ಲಾ ಕಾರ್ಯದರ್ಶಿ ನಾಗನಾಯಕನಹಳ್ಳಿ ರಾಧಕೃಷ್ಣ, ಗಣ್ಯಾತಿ ಗಣ್ಯರು ಭಾಗಿಯಾಗಿದ್ದರು.

Edited By : PublicNext Desk
Kshetra Samachara

Kshetra Samachara

23/09/2022 10:13 pm

Cinque Terre

2.22 K

Cinque Terre

0

ಸಂಬಂಧಿತ ಸುದ್ದಿ