ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಶಾಲೆ ಪುನರಾರಂಭ,ನೈಟ್ ಕರ್ಪ್ಯೂ ರದ್ದು-ಕೋವಿಡ್ ಸಭೆಯ ಹೈಲೆಟ್ಸ್ ಇಲ್ಲಿದೆ

ವರದಿ - ಗಣೇಶ್ ಹೆಗಡೆ

ಬೆಂಗಳೂರು: ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆ ಶಾಲೆಗಳನ್ನ ಬಂದ್ ಮಾಡಲಾಗಿತ್ತು. ಆದರೆ ಬೆಂಗಳೂರಿನಲ್ಲಿ ಕೊರೊನಾ ತೀವ್ರತೆ ಕಡಿಮೆ ಇರುವುದರಿಂದ ಶಾಲೆಗಳನ್ನ ಪುನರಾರಂಭಿಸಲು ಕರ್ನಾಟಕ ಸರ್ಕಾರ ನಿರ್ಧರಿಸಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗೃಹ ಕಚೇರಿ ಕೃಷ್ಣಾದಲ್ಲಿ ಸಭೆ ನಡೆಸಿ ಈ ತೀರ್ಮಾನ ಕೈಗೊಂಡಿದ್ದಾರೆ. ಬೆಂಗಳೂರಲ್ಲಿ ಸೋಮವಾರದಿಂದ ಎಲ್ಲಾ ತರಗತಿ ಪುನಾರಂಭವಾಗುತ್ತದೆ. ಇನ್ನೂ ನೈಟ್ ಕರ್ಪ್ಯೂ ಕೂಡಾ ಸೋಮವಾರ ದಿಂದ ರದ್ದಾಗಿದೆ. ಸಭೆಯ ಹೈಲೆಟ್ಸ್ ಕೇಳಗಿನಂತಿವೆ.

-ಗುಣಮುಖರಾಗುತ್ತಿರುವವರ ಪ್ರಮಾಣ ಹೆಚ್ಚಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆಯೂ ಕಡಿಮೆಯಾಗುತ್ತಿದೆ.

-ಆಸ್ಪತ್ರೆಗೆ ದಾಖಲಾಗುತ್ತಿರುವವರ ಸಂಖ್ಯೆ ಶೇ. 2ಕ್ಕೆ ಇಳಿದಿದೆ. ಈ ಹಿನ್ನೆಲೆಯಲ್ಲಿ ಈ ಕೆಳಕಂಡ ಕ್ರಮಗಳನ್ನು ಕೈಗೊಳ್ಳಲು ತಜ್ಞರ ಸಭೆಯಲ್ಲಿ ತೀರ್ಮಾನಿಸಲಾಯಿತು.

-ಜನವರಿ 31 ರಿಂದ ರಾತ್ರಿ ಕರ್ಫ್ಯೂ ರದ್ದು ಪಡಿಸಲು ನಿರ್ಧರಿಸಲಾಗಿದೆ.

-ಬೆಂಗಳೂರು ನಗರದಲ್ಲಿ ಜನವರಿ 31 ರಿಂದ ಶಾಲೆ, ಕಾಲೇಜುಗಳನ್ನು ತೆರೆಯಲು ತೀರ್ಮಾನಿಸಲಾಯಿತು.

-ಮೆಟ್ರೋ ರೈಲು ಸೇರಿದಂತೆ ಸಾರ್ವಜನಿಕ ಸಾರಿಗೆ ವ್ಯವಸ್ಥೆಗಳು ತಮ್ಮ ಆಸನ ಸಾಮರ್ಥ್ಯದಷ್ಟೇ ಪ್ರಯಾಣಿಕರೊಂದಿಗೆ ಕಾರ್ಯಾಚರಣೆ ನಡೆಸಬಹುದು.

-ಪಬ್ ಗಳು, ಕ್ಲಬ್ ಗಳು, ರೆಸ್ಟೋರೆಂಟ್ ಗಳು, ಬಾರ್, ಹೋಟೆಲ್ ಗಳಲ್ಲಿ ಶೇ. 50 ಆಸನ ಸಾಮರ್ಥ್ಯದಡಿ ಕಾರ್ಯ ನಿರ್ವಹಿಸುವ ನಿರ್ಬಂಧವನ್ನು ಹಿಂಪಡೆಯಲಾಗುವುದು.

-ಸಿನೆಮಾ, ಮಲ್ಟಿಪ್ಲೆಕ್ಸ್, ಥಿಯೇಟರ್ ಗಳು, ರಂಗಮಂದಿರಗಳು, ಆಡಿಟೋರಿಯಂ ಗಳು ಮತ್ತು ಇಂತರ ಸ್ಥಳಗಳಲ್ಲಿ ಶೇ. 50 ರ ಆಸನ ಸಾಮರ್ಥ್ಯದೊಂದಿಗೆ ಕಾರ್ಯ ನಿರ್ವಹಿಸಲಿವೆ.

-ವಿವಾಹ ಸಮಾರಂಭಗಳಿಗೆ ತೆರೆದ ಸ್ಥಳದಲ್ಲಿ 300 ಜನರಿಗೆ ಹಾಗೂ ಮುಚ್ಚಿದ ಸ್ಥಳಗಳಲ್ಲಿ 200 ಜನರಿಗೆ ಅವಕಾಶ.

-ಸರ್ಕಾರದ ಸಚಿವಾಲಯದಲ್ಲಿ ಶೇ. 50 ರಷ್ಟು ಸಿಬ್ಬಂದಿ ಕಾರ್ಯನಿರ್ವಹಿಸುವುದನ್ನು ರದ್ದು ಪಡಿಸಿ ಶೇ. ನೂರರಷ್ಟು ಸಿಬ್ಬಂದಿ ಕಾರ್ಯನಿರ್ವಹಿಸುವುದು.

-ಧಾರ್ಮಿಕ ಸ್ಥಳಗಳಲ್ಲಿ ದರ್ಶನ ಹಾಗೂ ಸೇವೆಗೆ ಅವಕಾಶ ನೀಡಲಾಗುವುದು. ಶೇ. 50ರ ಸಾಮರ್ಥ್ಯದಲ್ಲಿ ಪ್ರವೇಶಾವಕಾಶ ಕಲ್ಪಿಸಲಾಗುವುದು.

-ಎಲ್ಲ ಸಾಮಾಜಿಕ, ಧಾರ್ಮಿಕ ಮತ್ತು ರಾಜಕೀಯ ರ್ಯಾಲಿ, ಧರಣಿ, ಸಮಾವೇಶ, ಪ್ರತಿಭಟನೆಗಳಿಗೆ ಅವಕಾಶವಿಲ್ಲ.

-ಸ್ವಿಮ್ಮಿಂಗ್ ಪೂಲ್, ಜಿಮ್ ಗಳು ಶೇ. 50 ಸಾಮರ್ಥ್ಯದೊಂದಿಗೆ ಕಾರ್ಯನಿರ್ವಹಿಸುವುದು.

-ಸ್ಪೋಟ್ಸ್ ಕಾಂಪ್ಲೆಕ್ಸ್ ಮತ್ತು ಕ್ರೀಡಾಂಗಣಗಳಲ್ಲಿ ಶೇ. 50 ಸಾಮರ್ಥ್ಯದೊಂದಿಗೆ ಕಾರ್ಯನಿರ್ವಹಿಸುವುದು.

-ಕೇರಳ, ಮಹಾರಾಷ್ಟ್ರ, ಗೋವಾ ಗಡಿಗಳಲ್ಲಿ ತೀವ್ರ ನಿಗಾ ವಹಿಸುವುದು.

-ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ಚಿಕಿತ್ಸೆಗೆ ಶೇ. 25 ರಷ್ಟು ಹಾಸಿಗೆಗಳನ್ನು ನಿಗದಿಪಡಿಸಲು ನಿರ್ಧರಿಸಲಾಯಿತು.

-ಕೋವಿಡ್ ಹೊರತು ಪಡಿಸಿ, ಇತರ ಚಿಕಿತ್ಸೆಗಳನ್ನು ಸಮರ್ಪಕವಾಗಿ ಒದಗಿಸಲು ಕ್ರಮ ಕೈಗೊಳ್ಳುವಂತೆ ಸೂಚಿಸಲಾಯಿತು.

Edited By : Nagesh Gaonkar
PublicNext

PublicNext

29/01/2022 03:46 pm

Cinque Terre

33.51 K

Cinque Terre

0

ಸಂಬಂಧಿತ ಸುದ್ದಿ