ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಆನೇಕಲ್: ಕೊರೊನಾದಿಂದ ಮೃತಪಟ್ಟವರ ಕುಟುಂಬಕ್ಕೆ 1 ಲಕ್ಷ ರೂ. ಪರಿಹಾರ

ಆನೇಕಲ್: ಹೆಮ್ಮಾರಿ ಕೋವಿಡ್-19ನಿಂದ ಸಾವನ್ನಪ್ಪಿದವರ ಕುಟುಂಬಕ್ಕೆ ಶಾಸಕ ಬಿ. ಶಿವಣ್ಣ ಅವರು ಒಂದು ಲಕ್ಷ ರೂ. ಪರಿಹಾರವನ್ನು ವಿತರಣೆ ಮಾಡಿದ್ದಾರೆ.

ಆನೇಕಲ್ ತಾಲೂಕಿನ ಸೂರ್ಯಸಿಟಿ ಬಳಿಯ ಶಿವಣ್ಣ ಮನೆಯ ಬಳಿ ಜಿಲ್ಲಾ ಆಡಳಿತ ಬೆಂಗಳೂರು ನಗರ ಜಿಲ್ಲೆ ಹಾಗೂ ಆನೇಕಲ್ ವಿಧಾನಸಭಾ ಕ್ಷೇತ್ರದ ಸಹಯೋಗದಲ್ಲಿ 1 ಲಕ್ಷ ರೂ. ಪರಿಹಾರ ವಿತರಣೆ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಕೊರೊನಾದಿಂದ ಸಾವನ್ನಪ್ಪಿದವರ ಕುಟುಂಬಸ್ಥರಿಗೆ ಶಾಸಕ ಬಿ.ಶಿವಣ್ಣ ಸಾಂತ್ವನ ಹೇಳಿ ಸುಮಾರು 73 ಜನಕ್ಕೆ ಚೆಕ್ ವಿತರಣೆ ಮಾಡಿದರು. ಬಡತನ ರೇಖೆಗಿಂತ ಕೆಳಗಿರುವ ಕುಟುಂಬಕ್ಕೆ ಹಾಗೂ ಮನೆಯಲ್ಲಿ ಒಬ್ಬರಿಗೆ 1 ಲಕ್ಷ ರೂ. ಪರಿಹಾರ ಚೆಕ್ ವಿತರಣೆ ಮಾಡಲಾಯಿತು.

ಬಳಿಕ ಮಾತನಾಡಿದ ಶಾಸಕ ಬಿ ಶಿವಣ್ಣ, ಜೀವನ ನಿರ್ವಹಣೆ ಮಾಡಲು ಕಷ್ಟ ಆಗುತ್ತಿರುವ ಕುಟುಂಬಗಳಿಗೆ ಪರಿಹಾರ ಕೊಡಬೇಕಂತ ಸರ್ಕಾರಕ್ಕೆ ವಿಧಾನಸಭೆಯಲ್ಲಿ ಕಾಂಗ್ರೆಸ್ ಪಕ್ಷದ ಶಾಸಕರು ಮನವಿ ಮಾಡಿಕೊಂಡಿದ್ದೇವೆ. ಮನವಿಗೆ ಸ್ಪಂದಿಸಿ ಸರ್ಕಾರವು ಪರಿಹಾರಕ್ಕೆ ಅನು ಮಾಡಿಕೊಟ್ಟಿದೆ ಎಂದರು.

ಈ ಕಾರ್ಯಕ್ರಮದಲ್ಲಿ ತಹಶೀಲ್ದಾರ್ ದಿನೇಶ್, ಜಿಲ್ಲಾ ಅಡಳಿತ ಅಧಿಕಾರಿಗಳು, ಫಲಾನುಭವಿಗಳು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

Edited By : Vijay Kumar
Kshetra Samachara

Kshetra Samachara

29/01/2022 09:05 am

Cinque Terre

498

Cinque Terre

0

ಸಂಬಂಧಿತ ಸುದ್ದಿ