ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಹೆಚ್.ಎಸ್.ಆರ್ ಬಡಾವಣೆಯಲ್ಲಿ ಬಿಬಿಎಂಪಿ ಆಯುಕ್ತರಾದ ತುಷಾರ್ ಗಿರಿನಾಥ್ ಉದ್ಯಾನವನ ಮತ್ತು ಒಳಚರಂಡಿಗಳ ತಪಾಸಣೆ ಮಾಡಿದರು. ಇನ್ನು ಬೊಮ್ಮನಹಳ್ಳಿ ವಲಯದಲ್ಲಿ ಮಳೆಗಾಲದಲ್ಲಿ ತೆಗೆದುಕೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಸಮಾಲೋಚನೆ ಮಾಡಿದರು.
ಅಟಲ್ ಬಿಹಾರಿ ವಾಜಪೇಯಿ ಕ್ರೀಡಾಂಗಣದಲ್ಲಿ ಮಳೆ - ಗಾಳಿಯಿಂದ ಹಾನಿಗೊಳಗಾದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು ಹಾಗೂ ಶೀಘ್ರವಾಗಿ ಹಾನಿಗೊಳಗಾದ ಕೆನೋಫಿ ಯನ್ನು ಅಳವಡಿಸುವಂತೆ ಸೂಚನೆ ನೀಡಿದರು ಈ ಸಂದರ್ಭದಲ್ಲಿ ಬೊಮ್ಮನಹಳ್ಳಿ ವಲಯದ ಜಂಟಿ ಆಯುಕ್ತರಾದ ಕೃಷ್ಣ ಮೂರ್ತಿ ಮತ್ತು ಬಿಬಿಎಂಪಿ ಅಧಿಕಾರಿಗಳು ಉಪಸ್ಥಿತರಿದ್ದರು.
Kshetra Samachara
12/05/2022 05:44 pm