ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸುಪ್ರೀಂ ನಲ್ಲಿ ಬಿಬಿಎಂಪಿ ಚುನಾವಣೆ ಅರ್ಜಿ ವಿಚಾರಣೆ?

ಬೆಂಗಳೂರು : ಬಿಬಿಎಂಪಿ ಚುನಾವಣಾ ತಕರಾರು ಅರ್ಜಿ ಸುಪ್ರೀಂ ಕೋರ್ಟ್ ನಲ್ಲಿ ಜನವರಿ ಮೂರನೇ ವಾರದಲ್ಲಿ ವಿಚಾರಣೆಗೆ ಬರುವ ಸಾಧ್ಯತೆ ಇದೆ. ಬಿಬಿಎಂಪಿಗೆ ಚುನಾವಣೆ ನಡೆಸಬೇಕೆಂದು ಕೋರಿ ವಿರೋಧ ಪಕ್ಷದ ಮಾಜಿ ನಾಯಕರಾದ ಎಂ.ಶಿವರಾಜ್ ಹಾಗೂ ವಾಜೀದ್ ಅವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ಸುಪ್ರೀಂಕೋರ್ಟ್ನಲ್ಲಿದೆ. ಆದರೆ, ಅರ್ಜಿ ವಿಚಾರಣೆಯನ್ನು ಸುಪ್ರೀಂಕೋರ್ಟ್ ಕೈಗೆತ್ತಿಕೊಂಡಿಲ್ಲ.

ಇದೇ ತಿಂಗಳ 19 ರಂದು ಅರ್ಜಿ ವಿಚಾರಣೆ ನಡೆಯುವ ಸಾಧ್ಯತೆ ಗಳಿವೆ. ಒಂದು ವೇಳೆ ಅರ್ಜಿ ವಿಚಾರಣೆ ನಡೆದರೆ ಫೆಬ್ರವರಿ ಅಥವಾ ಮಾರ್ಚ್ ತಿಂಗಳಲ್ಲಿ ಚುನಾವಣೆ ನಡೆಯುವ ಸಾಧ್ಯತೆ ಇದೆ. 198 ವಾರ್ಡ್ ಗಳಿದ್ದ ಬಿಬಿಎಂಪಿಯನ್ನು 243ಕ್ಕೆ ಹೆಚ್ಚಿಸಿ ಬಿಬಿಎಂಪಿಗೆ ಆಡಳಿತಾಧಿಕಾರಿಯನ್ನು ನೇಮಿಸಿ ಚುನಾವಣೆಯನ್ನು ಮುಂದೂಡಲಾಗಿತ್ತು. ಇದನ್ನು ಪ್ರಶ್ನಿಸಿ ಎಂ.ಶಿವರಾಜ್ ಅವರು ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು.

ಹೈಕೋರ್ಟ್ ಎರಡು ತಿಂಗಳೊಳಗೆ ಚುನಾವಣೆ ನಡೆಸುವಂತೆ ಆದೇಶ ನೀಡಿತ್ತು. ಸರ್ಕಾರ ಮೇಲ್ಮನವಿ ಸಲ್ಲಿಸಿತ್ತು. ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ ನೀಡಿತ್ತು. ತಡೆಯಾಜ್ಞೆ ತೆರವುಗೊಳಿಸಿ ಚುನಾವಣೆ ನಡೆಸಬೇಕೆಂದು ಸಲ್ಲಿಸಿದ್ದ ಅರ್ಜಿ ವಿಚಾರಣೆ ಮೂಂದುಡಿತ್ತು. ಇನ್ನೂ ವರೆಗೂ ಅರ್ಜಿ ವಿಚಾರಣೆಗೆ ಬರಲಿಲ್ಲ.

Edited By : Nirmala Aralikatti
Kshetra Samachara

Kshetra Samachara

15/01/2022 12:06 pm

Cinque Terre

452

Cinque Terre

0

ಸಂಬಂಧಿತ ಸುದ್ದಿ