ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ರಾಜ್ಯದಲ್ಲಿ ಮತ್ತೆ ಏರಿಕೆಯತ್ತ ಕೋವಿಡ್‌: ಆರೋಗ್ಯ ಇಲಾಖೆಯಿಂದ ಇಂದು ಪರಿಶೀಲನಾ ಸಭೆ

ಬೆಂಗಳೂರು: ರಾಜ್ಯದಲ್ಲಿ ಸತತ ಒಂದು ವಾರದಿಂದ ನಿಧಾನವಾಗಿ ಕೋವಿಡ್​​ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿವೆ. 4 ನೇ ಅಲೆ ಆರಂಭವಾಗಿದೆಯಾ ? ಎಂಬ ಅನುಮಾನ ಶುರುವಾಗಿದೆ‌.‌ ಈಗಾಗಲೇ ದೆಹಲಿ ಸೇರಿದಂತೆ ಅಕ್ಕ-ಪಕ್ಕದ ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿವೆ. ಹೀಗಾಗಿ, ಆರೋಗ್ಯ ಇಲಾಖೆಯಿಂದ ಪರಿಶೀಲನಾ ಸಭೆ ಕರೆಯಲಾಗಿದೆ.

ಈ ಕುರಿತು ಆರೋಗ್ಯ ಸಚಿವ ಡಾ.ಕೆ ಸುಧಾಕರ್ ಪ್ರತಿಕ್ರಿಯಿಸಿದ್ದು, ಕಳೆದ ಎರಡು ವಾರದಿಂದ ದೆಹಲಿ ಸೇರಿದಂತೆ ಹಲವು ರಾಜ್ಯದಲ್ಲಿ ಕೋವಿಡ್ ಹೆಚ್ಚಳವಾಗುತ್ತಿವೆ. ಹೀಗಾಗಿ, ಆಸ್ಪತ್ರೆ ಸೇರುವವರ ಪ್ರಮಾಣದ ಬಗ್ಗೆ ನಾವು ಪರಿಶೀಲನೆ ಮಾಡಬೇಕು. ಈ ಬಗ್ಗೆ ಪರಿಶೀಲಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಇಂದು ಆರೋಗ್ಯ ಇಲಾಖೆಯಲ್ಲಿ ಪರಿಶೀಲನಾ ಸಭೆ ಇದ್ದು, ಈ ಬಗ್ಗೆ ಚರ್ಚೆ ಮಾಡುತ್ತೇವೆ ಎಂದರು.

ಜನರು ಉದಾಸೀನ ಮಾಡದೇ ಕಾರ್ಯಕ್ರಮ, ಸಭೆಗಳಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಜತೆಗೆ ಕೋವಿಡ್​​ 3ನೇ ಡೋಸ್ ಲಸಿಕೆಯನ್ನು ಪಡೆಯಬೇಕು ಎಂದು ಸಚಿವ ಸುಧಾಕರ್​​ ಮನವಿ ಮಾಡಿದರು. ರಾಜ್ಯದಲ್ಲಿ ಸುಮಾರು 30 ಲಕ್ಷ ಜನರು ಇನ್ನೂ 2ನೇ ಡೋಸ್ ತೆಗೆದುಕೊಂಡಿಲ್ಲ.

ಕೂಡಲೇ 2ನೇ ಡೋಸ್ ಮತ್ತು 3ನೇ ಡೋಸ್ ಕಡ್ಡಾಯವಾಗಿ ತೆಗೆದುಕೊಳ್ಳಬೇಕು. ಈಗಾಗಲೇ ಸೋಂಕು ಹರಡದಂತೆ ರಾಜ್ಯದಲ್ಲಿ ಎಚ್ಚರಿಕೆ ಕ್ರಮವಹಿಸಿದ್ದೇವೆ. ವಿಮಾನ ನಿಲ್ದಾಣದಲ್ಲಿ ಅಗತ್ಯವಾದ ಮುಂಜಾಗ್ರತಾ ಕ್ರಮಕ್ಕೆ ಸೂಚನೆ ನೀಡಲಾಗಿದೆ. ದೆಹಲಿಯಲ್ಲಿ ಬಂದ ಮೇಲೆ ಬೇರೆ ರಾಜ್ಯಗಳಿಗೂ ಇದು ಹರಡುತ್ತದೆ. ಹೀಗಾಗಿ, ಜನರು ಎಚ್ಚರಿಕೆಯಿಂದ ಇರಬೇಕು‌ ಎಂದು ಸಚಿವರು ಸಲಹೆ ನೀಡಿದರು.

Edited By :
PublicNext

PublicNext

20/04/2022 05:12 pm

Cinque Terre

39.63 K

Cinque Terre

1

ಸಂಬಂಧಿತ ಸುದ್ದಿ