ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಜಿಲ್ಲಾಡಳಿತದಿಂದ ಹೊಸಕೋಟೆಯಲ್ಲಿ ಬೃಹತ್ ಆರೋಗ್ಯ ಶಿಬಿರ ಆಯೋಜನೆ

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ವತಿಯಿಂದ ಹೊಸಕೋಟೆಯ ಚನ್ನಬೈರೇಗೌಡ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಬೃಹತ್ ಆರೋಗ್ಯ ಶಿಬಿರ ಕಾರ್ಯಕ್ರಮವನ್ನು ಶಾಸಕ ಶರತ್ ಬಚ್ಚೇಗೌಡ ಉದ್ಘಾಟಿಸಿದರು.

ಬಳಿಕ ಮಾತನಾಡಿದ ಅವರು, ಬಡವರ ಆರೋಗ್ಯದಲ್ಲಿ ವೆಚ್ಚವನ್ನು ಈ ಶಿಬಿರಗಳ ಮೂಲಕ ಕಡಿಮೆ ಮಾಡಬಹುದಾಗಿದೆ. ಕೊರೊನಾ ಸಮಯದಲ್ಲಿ ವೈದ್ಯರು ಹಾಗೂ ಆಶಾ ಕಾರ್ಯಕರ್ತೆಯರು ಮನೆ ಮನೆಗೆ ತೆರಳಿ ಸೇವೆ ಸಲ್ಲಿಸಿದ್ದಾರೆ. ಜಿಲ್ಲಾಡಳಿತ ವತಿಯಿಂದ ಆಯೋಜಿಸಲಾಗಿರುವ ಈ ಉಚಿತ ಶಿಬಿರದಲ್ಲಿ ನೂರಾರು ಜನರು ಆರೋಗ್ಯ ತಪಾಸಣೆ ಮಾಡಿಸಿಕೊಂಡು ಉಚಿತ ಔಷಧಿ ಪಡೆದುಕೊಂಡರು. ಈ ವೇಳೆ ಜಿಲ್ಲಾ ಆರೋಗ್ಯಧಿಕಾರಿ ಡಾ.ತಿಪ್ಪೇಸ್ವಾಮಿ, ತಾಲೂಕು ಆರೋಗ್ಯಧಿಕಾರಿ ಡಾ.ವೀಣಾ, ಮೊದಲಾದವರು ಉಪಸ್ಥಿತರಿದ್ದರು.

Edited By : Manjunath H D
Kshetra Samachara

Kshetra Samachara

20/04/2022 06:48 pm

Cinque Terre

2.72 K

Cinque Terre

0

ಸಂಬಂಧಿತ ಸುದ್ದಿ