ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಮಂಕಿ ಪಾಕ್ಸ್ ರಾಜ್ಯದಲ್ಲಿ ಇನ್ನೂ ಪತ್ತೆಯಾಗಿಲ್ಲ: ಸಚಿವ ಸುಧಾಕರ

ಬೆಂಗಳೂರು: ರಾಜ್ಯದಲ್ಲಿ ಈವರೆಗೆ ಮಂಕಿ ಪಾಕ್ಸ್‌ ಪ್ರಕರಣ ಕಂಡುಬಂದಿಲ್ಲ. ಆರಂಭದಿಂದಲೇ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಲಾಗುತ್ತಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ಸ್ಪಷ್ಟಪಡಿಸಿದರು.

ವಿಶ್ವ ವ್ಯಾಸ್ಕ್ಯುಲರ್‌ ದಿನದ ಪ್ರಯುಕ್ತ, ವ್ಯಾಸ್ಕ್ಯುಲರ್‌ ಸರ್ಜನ್ಸ್‌ ಅಸೋಸಿಯೇಶನ್‌ ವತಿಯಿಂದ ಆಯೋಜಿಸಿದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮಂಕಿ ಪಾಕ್ಸ್‌ ಹಿನ್ನೆಲೆಯಲ್ಲಿ ಗಡಿ ಭಾಗಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಆಸ್ಪತ್ರೆಗಳಲ್ಲೂ ಚಿಕಿತ್ಸೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಅಂತರಾಷ್ಟ್ರೀಯ ಪ್ರಯಾಣಿಕರು ರಾಜ್ಯಕ್ಕೆ ಬಂದಾಗ ಮಾರ್ಗಸೂಚಿಯನ್ನು ಪಾಲಿಸಬೇಕು. ಇಥಿಯೋಪಿಯಾದಿಂದ ಬಂದಿದ್ದ ವ್ಯಕ್ತಿಯೊಬ್ಬರಿಗೆ ಮಂಕಿ ಪಾಕ್ಸ್‌ ಇರುವ ಅನುಮಾನದ ಮೇಲೆ ಪರೀಕ್ಷೆಗೆ ಒಳಪಡಿಸಲಾಗಿತ್ತು. ಆದರೆ ಅದು ಮಂಕಿ ಪಾಕ್ಸ್‌ ಅಲ್ಲ, ಸ್ಮಾಲ್‌ ಪಾಕ್ಸ್‌ ಎಂದು ದೃಢಪಟ್ಟಿದೆ ಎಂದರು.

ಇನ್ನು ದೇಶದಲ್ಲಿ ವ್ಯಾಸ್ಕ್ಯುಲರ್‌ ತಜ್ಞರು ಬಹಳ ಕಡಿಮೆ ಇದ್ದಾರೆ. ಈ ಆರೋಗ್ಯದ ಸಮಸ್ಯೆ ಬಗ್ಗೆ ನಗರ ಪ್ರದೇಶಗಳಲ್ಲಿ ಹೆಚ್ಚು ಜಾಗೃತಿ ಮೂಡಿಸಬೇಕಿದೆ. ವ್ಯಾಸ್ಕ್ಯುಲರ್‌ ಸಮಸ್ಯೆಗಳು ಬೇರೆ ಅನಾರೋಗ್ಯಕ್ಕೂ ದಾರಿ ಮಾಡಿಕೊಡುತ್ತವೆ. ಯುವಜನರಲ್ಲಿ ಹಾಗೂ ವೃತ್ತಿಪರರಿಗೆ ಈ ವಿಚಾರದಲ್ಲಿ ನೆರವಾಗಬೇಕಿದೆ ಎಂದರು.

Edited By : Shivu K
Kshetra Samachara

Kshetra Samachara

06/08/2022 10:08 pm

Cinque Terre

3.06 K

Cinque Terre

0

ಸಂಬಂಧಿತ ಸುದ್ದಿ