ಬೆಂಗಳೂರು : ಕರ್ನಾಟಕ ಸರ್ಕಾರ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಯಲಹಂಕದ ಮುತ್ತುಗದ ಹಳ್ಳಿಯಲ್ಲಿ ನಿರ್ಮಿಸಿರುವ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯವನ್ನು ಸಮಾಜ ಕಲ್ಯಾಣ & ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಉದ್ಘಾಟಿಸಿದರು.
BDA ಅಧ್ಯಕ್ಷರು, ಯಲಹಂಕ ಶಾಸಕ ಎಸ್.ಆರ್.ವಿಶ್ವನಾಥ್ MLC ಗೋಪಿನಾಥ್ ರೆಡ್ಡಿ ಸಚಿವರ ಕಾರ್ಯಕ್ಕೆ ಕೈಜೋಡಿಸಿದರು.
ನಮ್ಮ ಸರ್ಕಾರ ರಾಜ್ಯಾದ್ಯಂತ ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ದುಡಿಯುತ್ತಿದೆ. ಹಾಗೆಯೇ ರಾಜ್ಯದಲ್ಲಿ1704 ಬಾಲಕಿಯರ ಹಾಸ್ಟೆಲ್ ಗಳಲ್ಲಿ ಕರಾಟೆ ಕ್ಲಾಸಸ್ ತೆರೆಯಲಾಗುವುದು. ಈ ಮೂಲಕ ಮಹಿಳಾ ಸಭಲೀಕರಣಕ್ಕೆ ಹೆಚ್ಚು ಒತ್ತು ನೀಡಲಾಗುವುದು ಎಂದರು.
ಕಾರ್ಯಕ್ರಮದಲ್ಲಿ ಬಿಜೆಪಿ ಪಕ್ಷದ ಕಾರ್ಯಕರ್ತರು, ಗ್ರಾಮ ಪಂಚಾಯತಿ ಅಧ್ಯಕ್ಷರು, ಸದಸ್ಯರು ಹಾಗೂ ಮುತ್ತುಕದಹಳ್ಳಿ ಗ್ರಾಮಸ್ಥರು ಉಪಸ್ಥಿತರಿದ್ದರು.
ಸುರೇಶ್ ಬಾಬು ಪಬ್ಲಿಕ್ ನೆಕ್ಸ್ಟ್ Yalahanka..
PublicNext
05/07/2022 09:51 am