ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಜನರ ಹರ್ಷೋದ್ಗಾರದ ನಡುವೆ ಪುನೀತ್ ರಾಜ್ ಕುಮಾರ್ ವಾಡ್೯ ಹೆಸರು ಘೋಷಿಸಿದ ಸಿ.ಎಂ ಬಸವರಾಜ

ಬೆಂಗಳೂರು: ಮಹಾಕ್ಷ್ಮೀ ಲೇಔಟ್ ವಿಧಾನ ಸಭಾಕ್ಷೇತ್ರ ವ್ಯಾಪ್ತಿಯ ಹೊಸವಾಡ್೯ 55 ಕ್ಕೆ ಡಾ ಪುನೀತ್ ರಾಜ್ ಕುಮಾರ್ ಎಂದು ನಾಮಕರಣಮಾಡಿ‌‌ ಸಿಎಂ ಬಸವರಾಜ ಬೊಮ್ಮಾಯಿಯವರು ಇಂದು ಅಧಿಕೃತವಾಗಿ ಘೋಷಣೆ ಮಾಡಿದರು.

ಮಹಾಲಕ್ಷ್ಮೀ ಲೇಔಟ್ ವಿಧಾನಸಭಾಕ್ಷೇತ್ರ, ಹಾಗೂ ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿ ಹಲವು ಅಭಿವೃದ್ಧಿ ಕಾರ್ಯಕ್ರಮಗಳಿಗೆ ಶಂಖುಸ್ಥಾಪನೆ ಹಾಗೂ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ನೆರವೇರಿಸಿದ ನಂತರ ಕುರುಬರಹಳ್ಳಿಯಲ್ಲಿ ನಡೆದ ಸಾರ್ವಜನಿಕ ಸಮಾರಂಭದಲ್ಲಿ ಜನರ ಹರ್ಷೋದ್ಘಾರದ ನಡುವೆ ಪುನೀತ್ ರಾಜ್ ಕುಮಾರ್ ವಾಡ್೯ ಹೆಸರನ್ನು ಉದ್ಘೋಷಿಸಿದರು.

ಮುಖ್ಯಮಂತ್ರಿಗಳ ನವ ನಗರೋತ್ಥಾನ ಯೋಜನೆ ಅಡಿ ಹೊರವತ್ತುಲ ರಸ್ತೆಯಿಂದ ಕುರುಬರಹಳ್ಳಿ ಪೈಪ್ಲೈನ್ ರಸ್ತೆ ಮಾರ್ಗವಾಗಿ ಪಶ್ಚಿಮ ಕಾರ್ಡ್ ರಸ್ತೆಗೆ ವರೆಗೆ ನಿರ್ಮಿಸಲು ಉದ್ದೇಶಿಸಿರುವ ಮೇಲು ಸೇತುವೆ ನಿರ್ಮಾಣ ಕಾಮಗಾರಿಗೆ ಶಂಕು ಸ್ಥಾಪನೆ ನೆರವೇರಿಸಿದರು.

ಸಮಾರಂಭದಲ್ಲಿ ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯಿಂದ ನಿರ್ಮಿಸಲಾಗಿರುವ ಮನೆಗಳ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಸಚಿವರಾದ ಗೋಪಾಲಯ್ಯ, ಬೈರತಿ ಬಸವರಾಜ, ಮುನಿರತ್ನ, ನಗರಾಭಿವೃದ್ಧಿ ಇಲಾಖೆ ಎಸಿಎಸ್ ರಾಕೇಶ ಸಿಂಗ್, ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ ಗಿರಿನಾಥ ಮತ್ತು ಇತರರು ಉಪಸ್ಥಿತರಿದ್ದರು.

ಸಮಾರಂಭದ ಕೆಲವು ಝಲಕ್ ಗಳು ಇಲ್ಲಿವೆ...

-ಪ್ರವೀಣ್ ರಾವ್

Edited By : Somashekar
PublicNext

PublicNext

17/07/2022 10:19 pm

Cinque Terre

37.77 K

Cinque Terre

0

ಸಂಬಂಧಿತ ಸುದ್ದಿ