ಬೆಂಗಳೂರು : ವಾಲ್ಮೀಕಿ ಸಮುದಾಯಕ್ಕೆ ಶೇ.7.5ಕ್ಕೆ ಮೀಸಲಾತಿ ಹೆಚ್ಚಳಕ್ಕೆ ಒತ್ತಾಯಿಸಿ ಹಾಗೂ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ನೀಡಿದ ವರದಿಯನ್ನು ಕೂಡಲೇ ಜಾರಿಗೊಳಿಸಲು ಆಗ್ರಹಿಸಿ ಪಟ್ಟಣದ ತಾಲೂಕು ವಾಲ್ಮೀಕಿ ನಾಯಕ ಸಂಘ ಹಾಗೂ ಬಹುಜನ ಸಮಾಜ ಪಾರ್ಟಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಈ ವೇಳೆ ತಾಲೂಕು ವಾಲ್ಮೀಕಿ ನಾಯಕ ಸಂಘದ ಅಧ್ಯಕ್ಷ ಎನ್.ನಾಗೇಶ್ ಬಾಬು ಮಾತನಾಡಿ ಪರಿಶಿಷ್ಟ ಪಂಗಡಗಳಲ್ಲಿಯೇ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ವಾಲ್ಮೀಕಿ ನಾಯಕ ಸಮುದಾಯಕ್ಕೆ ಜನಸಂಖ್ಯೆ ಆಧಾರದ 3ರಷ್ಟು ಮೀಸಲಾತಿಯನ್ನ 7.5ಕ್ಕೆ ಹೆಚ್ಚಳ ಮಾಡಬೇಕು. ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸರ ಆಯೋಗ ತನ್ನ ವರದಿ ಸಲ್ಲಿಸಿ ಒಂದೂವರೆ ವರ್ಷ ಕಳೆದರೂ ಸರ್ಕಾರ ವಿಳಂಬ ನೀತಿ ಅನುಸರಿಸುತ್ತಿದೆ.
ಜಾರಿಗೊಳಿಸುವಂತೆ ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿ ಬೆಂಗಳೂರಿನಲ್ಲಿ ಅಹೋರಾತ್ರಿ ಧರಣಿ ಸತ್ಯಾಗ್ರಹ ನಡೆಸುತ್ತಿದ್ದಾರೆ.
ಈ ವೇಳೆಯಲ್ಲಿ ವಾಲ್ಮೀಕಿ ನಾಯಕ ಸಮಾಜದ ಮುಖಂಡ ಡಾ.ಮೂರ್ತಿ, ಜಿಪಂ ಮಾಜಿ ಸದಸ್ಯ ರಾಧಮ್ಮ ಸೇರಿದಂತೆ ಹತ್ತಾರು ಜನ ಮುಖಂಡರು ಉಪಸ್ಥಿತರಿದ್ದರು.
Kshetra Samachara
26/05/2022 10:06 am