ಬೆಂಗಳೂರು:ಮೂರು ದಿನದಲ್ಲಿ ರಸ್ತೆ ಗುಂಡಿ ಮುಚ್ಚದೆ ಹೋದರೆ ಸಂಬಂಧಪಟ್ಟ ಪಾಲಿಕೆ ವಾರ್ಡ್ ಅಧಿಕಾರಿಗಳನ್ನು ಅಮಾನತ್ತು ಮಾಡಲಾಗುತ್ತದೆ ಎಂದು ಬಿಬಿಎಂಪಿ ವಿಶೇಷ ಆಯುಕ್ತ ರವೀಂದ್ರ ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಮಂಗಳವಾರ ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ನಡೆದ ಪ್ರೆಸ್ ಮೀಟ್ ನಲ್ಲಿ ಈ ವಿಚಾರ ತಿಳಿಸಿದ್ದು ಈಗಾಗಲೇ ಸಿಎಂ ಕೂಡಾ ನಿನ್ನೆ ರಸ್ತೆ ಗುಂಡಿ ವಿಚಾರಕ್ಕೆ ಸಂಬಂಧಿಸಿದಂತೆ ಪಾಲಿಕೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಹೀಗಾಗಿ ಇನ್ನೂ ಮೂರು ದಿನದಲ್ಲಿ ನಗರದ ರಸ್ತೆಗಳು ಗುಂಡಿ ಮುಕ್ತವಾಗಬೇಕು.ಇಲ್ಲಾವಾದಲ್ಲಿ ಕಠಿಣ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ರವೀಂದ್ರ ತಿಳಿಸಿದರು.
PublicNext
15/06/2022 11:35 am