ಬೆಂಗಳೂರು: ಬೂತ್ ಮಟ್ಟದ ಕಾರ್ಯಕರ್ತರೊಂದಿಗೆ ಮಾತನಾಡಲು ಕಲ್ಯಾಣ ಕರ್ನಾಟಕ ಭಾಗದಲ್ಲಿ ನಾನು ಪ್ರವಾಸ ಮಾಡುತ್ತಿದ್ದೇನೆ. ಡಬಲ್ ಇಂಜಿನ್ ಸರ್ಕಾರ ಕಲ್ಯಾಣ ಕರ್ನಾಟಕ ಭಾಗಕ್ಕೆ ಒಳ್ಳೆಯ ಅನುದಾನ ಕೊಟ್ಟಿದೆ. ಕಾಂಗ್ರೆಸ್ ಪಕ್ಷವನ್ನು ಸೋಲಿಸಲು ಕಾರ್ಯಕರ್ತರು ಸಂಕಲ್ಪ ತೊಟ್ಟಿದ್ದಾರೆ. ಹಾಗಾಗಿ ಕಲ್ಯಾಣ ಕರ್ನಾಟಕ ಭಾಗದ ಕಾರ್ಯಕರ್ತರನ್ನು ಮಾತನಾಡಿಸಲು ನಾನು ಆ ಭಾಗಕ್ಕೆ ಹೋಗುತ್ತಿದ್ದೇನೆ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಹೇಳಿದ್ದಾರೆ.
ಸಚಿವ ಸಂಪುಟ ವಿಸ್ತರಣಾ ವಿಚಾರವಾಗಿಯೂ ಪ್ರತಿಕ್ರಿಯಿಸಿದ ಅವರು, ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ವಿಶೇಷ ಅಧಿಕಾರ ಇದೆ. ಸರಿಯಾದ ಸಂದರ್ಭದಲ್ಲಿ ಸರಿಯಾದ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದರು.
PublicNext
28/09/2022 11:58 am