ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: "ದೇವನಹಳ್ಳಿಗೆ ಹೈಟೆಕ್ ಲೈಬ್ರೆರಿ, ಅಂತಾರಾಷ್ಟ್ರೀಯ ಸೌಲಭ್ಯ ಒದಗಿಸಲು ಸರ್ಕಾರ ಬದ್ಧ"

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿಯನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾ ಕೇಂದ್ರ ಎಂದು ಘೋಷಿಸಿದ ಮೇಲೆ ರಾಜ್ಯ ಸರ್ಕಾರ ಕೋಟ್ಯಾಂತರ ರೂಪಾಯಿ ವೆಚ್ಚದಲ್ಲಿ ಅಭಿವೃದ್ಧಿ ಕಾಮಗಾರಿ ಕೈಗೆತ್ತಿಕೊಂಡಿದೆ.

ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಮೇಲ್ದರ್ಜೆಗೇರಿಸುವುದು, 4 ಘನತ್ಯಾಜ್ಯ ಘಟಕ ಸ್ಥಾಪನೆ, ಗರಡಿ ಮನೆ, ಜಿಲ್ಲಾ ಮಟ್ಟದ ಹೈಟೆಕ್ ಲೈಬ್ರೆರಿ, ಬಾಲಕಿಯರ ಹಾಸ್ಟೆಲ್ಸ್ ಹೀಗೆ ಕೋಟ್ಯಾಂತರ ರೂಪಾಯಿ ವೆಚ್ಚದಲ್ಲಿ ದೇವನಹಳ್ಳಿಯನ್ನು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಇರುವುದರಿಂದ ಅಭಿವೃದ್ಧಿ ಪಡಿಸಲಾಗುವುದು ಎಂದು ದೇವನಹಳ್ಳಿಯಲ್ಲಿ ಸಚಿವ ಸುಧಾಕರ್ ಸ್ಪಷ್ಟಪಡಿಸಿದರು.

ಸಚಿವರಿಗೆ ದೇವನಹಳ್ಳಿ ಶಾಸಕ ನಿಸರ್ಗ ನಾರಾಯಣ ಸ್ವಾಮಿ ಹಾಗೂ ಅಧಿಕಾರಿಗಳು ಸಾಥ್ ನೀಡಿದರು.

- ಸುರೇಶ್ ಬಾಬು, ಪಬ್ಲಿಕ್ ನೆಕ್ಸ್ಟ್ ದೇವನಹಳ್ಳಿ

Edited By :
PublicNext

PublicNext

24/08/2022 08:03 am

Cinque Terre

27.23 K

Cinque Terre

0

ಸಂಬಂಧಿತ ಸುದ್ದಿ