ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಒತ್ತುವರಿ ತೆರವು ಮುಲಾಜಿಲ್ಲದೆ ಕ್ರಮ‌ ---ಸಿ.ಎಂ

ಬೆಂಗಳೂರು, ಸೆಪ್ಟೆಂಬರ್ 12: ಒತ್ತುವರಿ ತೆರವುಗೊಳಿಸುವ ಕಾರ್ಯಾಚರಣೆಯಲ್ಲಿ ಯಾವುದೇ ಭೇದಭಾವ ಮಾಡುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು..

ರಾಜಕಾಲುವೆ ಮೇಲೆ ಕಟ್ಟಡ,ಮನೆ ಕಟ್ಟಿರುವವರಿಂದ ಸಮಸ್ಯೆ ಆಗಿದೆ... ಕೆಲವರು ರಾಜಕಾಲುವೆಯನ್ನು ಮುಚ್ಚಿದ್ದಾರೆ. ಮಳೆ ನೀರು ಚರಂಡಿಗೆ ಅಡ್ಡಿಯಾಗಿದ್ದರೆ, ಅವುಗಳನ್ನು ತೆರವುಗೊಳಿಸಲು ಸೂಚನೆ ನೀಡಲಾಗಿದೆ ಎಂದರು.

ಪ್ರವಾಹ ಬಂದಾಗ ಐಟಿ ಬಿಟಿಯವರು ಸೇರಿದಂತೆ ಎಲ್ಲರಿಗೂ ತೊಂದರೆಯಾಗಿದೆ, ಜನಸಾಮಾನ್ಯರು, ಕೆಳಹಂತದ ಮನೆಗಳಿಗೂ ತೊಂದರೆಯಾಗಿದೆ. ಇವುಗಳನ್ನು ತೆರೆವುಗೊಳಿಸುವ ಕಾರ್ಯವನ್ನು ಪೂರ್ಣಗೊಳಿ ಸಲಾಗುವುದು ಎಂದು ತಿಳಿಸಿದರು.

ಹಲವಾರು ಪ್ರಕರಣಗಳು ನ್ಯಾಯಾಲಯದಲ್ಲಿ ದಾಖಲಾಗಿ ನಿರ್ದೇಶನ ಪಡೆಯಲಾಗಿದೆ. ನ್ಯಾಯಾಲಯದಲ್ಲಿಯೂ ಗಂಭೀರವಾಗಿ ಇವುಗಳ ಮಾಹಿತಿಯನ್ನು ನೀಡಲಾಗುವುದು. ನ್ಯಾಯಾಲಯವೂ ಪ್ರವಾಹದ ಪ್ರಕರಣದಲ್ಲಿ ನಿರ್ದೇಶನಗಳನ್ನು ನೀಡಿದೆ. ಈ ಬಾರಿ ದೊಡ್ಡ ಪ್ರಮಾಣದಲ್ಲಿ ಅತಿಕ್ರಮಣ ತೆರೆವುಗೊಳಿಸಲಾಗುವುದು ಎಂದು ಹೇಳಿದ್ರು...

Edited By : Somashekar
PublicNext

PublicNext

12/09/2022 06:25 pm

Cinque Terre

29.54 K

Cinque Terre

9

ಸಂಬಂಧಿತ ಸುದ್ದಿ