ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಕಾಳೇನ ಅಗ್ರಹಾರ ಕೆರೆ ಅಭಿವೃದ್ಧಿ ಕಾಮಗಾರಿ ವೀಕ್ಷಿಸಿ ಖುಷ್ ಆದ ಕೇಂದ್ರ ಸಚಿವೆ

ಬೆಂಗಳೂರು: ಇಂದು ಬೆಂಗಳೂರಿನ ಕಾಳೇನ ಅಗ್ರಹಾರ ಕೆರೆಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿ ನೀಡಿ ಅಭಿವೃದ್ಧಿ ಕಾಮಗಾರಿಯನ್ನು ವೀಕ್ಷಿಸಿದರು.

ಒಟ್ಟು 3 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಕೆರೆ ಅಭಿವೃದ್ಧಿ ಕಾಮಗಾರಿಯನ್ನುಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ವೀಕ್ಷಣೆ ಮಾಡಿದರು. ಕೇಂದ್ರ ಕ್ಯಾಬಿನೆಟ್ ನಿಂದ 75 ಲಕ್ಷ ರೂ.ಈ ಕೆರೆ ಅಭಿವೃದ್ಧಿಗೆ ನೀಡಲಾಗಿದ್ದು, ಕೆರೆ ಅಭಿವೃದ್ಧಿ ಕಾಮಗಾರಿ ನೋಡಿ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಖುಷಿಯಾಗಿದ್ದಾರೆ.

ಒಟ್ಟು 30 ಎಕರೆ ಇರುವ ಕಾಳೇನ ಅಗ್ರಹಾರ ಕೆರೆಯನ್ನು ಅಭಿವೃದ್ಧಿ ಮಾಡಲು ಕೇಂದ್ರ ಸರ್ಕಾರ ಬಿಬಿಎಂಪಿಗೆ ಹಣವನ್ನು ನೀಡಿದ್ದು, ಕೆರೆ ಅಭಿವೃದ್ಧಿ ಕಾಮಗಾರಿ ವೀಕ್ಷಣೆ ವೇಳೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಎಂಎಲ್ಎ ಕೃಷ್ಣಪ್ಪ ಮತ್ತು ಸ್ಥಳೀಯ ನಿವಾಸಿಗಳು ಸಾಥ್ ನೀಡಿದ್ದರು. ಸ್ಥಳೀಯರೊಂದಿಗೆ ಮಾತನಾಡಿ ಕೆರೆಯ ಅಭಿವೃದ್ಧಿ ಕಾಮಗಾರಿ ಬಗ್ಗೆ ಮಾಹಿತಿ ನಿರ್ಮಲಾ ಸೀತಾರಾಮನ್ ಮಾಹಿತಿ ಪಡೆದರು. ಕೆರೆಯ ಸುತ್ತ ವಾಕ್ ಮಾಡಿದರು. ಗಿಡವನ್ನು ನೆಟ್ಟು ಇಲ್ಲಿಂದ ನಿರ್ಮಗಮಿಸಿದರು ಕೇಂದ್ರ ಸಚಿವೆ ನಿರ್ಮಲ ಸೀತಾರಾಮನ್.

ನವೀನ್ ಪಬ್ಲಿಕ್ ನೆಕ್ಸ್ಟ್ ಬೆಂಗಳೂರು

Edited By :
PublicNext

PublicNext

15/05/2022 12:08 pm

Cinque Terre

38.91 K

Cinque Terre

2

ಸಂಬಂಧಿತ ಸುದ್ದಿ