ಬೆಂಗಳೂರು: ಇವತ್ತಿನ ಸರ್ಕಾರ ಗಲ್ಲಿ ರೌಡಿಗಳಂತೆ ನಡೆದುಕೊಳ್ಳುತ್ತಿದೆ. ನಮ್ಮ ಹೋರಾಟ ಶಾಸಕರ ವಿರುದ್ಧ ಮತ್ತು ಕಾಮುಕರ ವಿರುದ್ಧ. ಸರ್ಕಾರಗಳು ದಿಕ್ಕು ತಲುಪಿಸುವ ಕೆಲಸ ಮಾಡುತ್ತಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣ ರಾಜ್ಯಾಧ್ಯಕ್ಷ ಕೃಷ್ಣೇಗೌಡರು ಸರ್ಕಾರದ ವಿರುದ್ಧ ಸುದ್ದಿಗೋಷ್ಠಿಯಲ್ಲಿ ಆಕ್ರೋಶ ವ್ಯಕ್ತಪಡಿಸಿದರು.
ಸೂರ್ಯ ನಗರ ಒಂದನೇ ಹಂತದಲ್ಲಿ ಹಮ್ಮಿಕೊಂಡಿದ್ದ ಸುದ್ದಿಗೋಷ್ಠಿಯಲ್ಲಿ ಭಾಗವಹಿಸಿ ಮಾತನಾಡಿದ ಅವರು ಇದೇ ತಿಂಗಳು 22ನೇ ತಾರೀಖಿನಂದು ಎಲೆಕ್ಟ್ರಾನಿಕ್ ಸಿಟಿ ನ್ಯೂಟೌನ್‌ನಲ್ಲಿ ನಡೆಯಲಿರುವ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನ ಬಣ ರಾಜ್ಯಮಟ್ಟದ ಗಡಿನಾಡು ಕನ್ನಡಿಗರ ಸಂಭ್ರಮ ಎಂಬ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ ಇನ್ನು ಉದ್ಘಾಟನೆಯನ್ನು ಮಾಜಿ ಮುಖ್ಯಮಂತ್ರಿಗಳಾದ ಕುಮಾರಸ್ವಾಮಿ ಅವರು ನೆರವೇರಿಸಲಿದ್ದಾರೆ ಎಂದು ತಿಳಿಸಿದರು. ಸರ್ಕಾರ ಇವತ್ತು ನಡಿತಿರೋದು ಸಂದರ್ಭ ನೋಡಿದರೆ ಒಂದು ರೀತಿ ಆತಂಕದ ಬೆಳವಣಿಗೆಯನ್ನು ಕಾಣುವಂತಾಗಿದೆ ಇವತ್ತು ಏನಪ್ಪ ಮುಂದೆ ಏನಪ್ಪ..!! ಅಂತ ಆತಂಕ ಕಾಡುತ್ತಿದೆ. ಚುನಾಯಿತ ಪ್ರತಿನಿಧಿಗಳು ತಮ್ಮ ಕೆಲಸಗಳ ಜವಾಬ್ದಾರಿಗಳನ್ನು ಮರೆತು ಮನಕುಲುಕುವ ವಿಷಯಗಳ ಬಗ್ಗೆ ಹೆಚ್ಚು ಒತ್ತು ನೀಡುತಿದ್ದಾರೆ. ರೈತರ ಸಮಸ್ಯೆಗಳು ಹೆಚ್ಚು ಕಾಡುತ್ತಿದೆ. ಉದ್ಯೋಗ ಸಿಗದ ಕಾರಣಕ್ಕೆ ಆತ್ಮಹತ್ಯೆಗಳು ನಡೆಯುತ್ತಿವೆ. ಹೀಗಾಗಿ ಸರಕಾರಕ್ಕೆ ಎಚ್ಚರಿಕೆ ನೀಡುವ ಸಲುವಾಗಿ ಒಂದು ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ಅಧ್ಯಕ್ಷ ಕೃಷ್ಣೇಗೌಡ ತಿಳಿಸಿದರು.
Kshetra Samachara
20/05/2022 05:22 pm