ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರನ್ನು ಮಾದರಿ ನಗರವಾಗಿಸಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ:ಸಿಎಂ

ಬೆಳಗಾವಿ: ಬೆಂಗಳೂರು ಮಹಾನಗರವನ್ನು ಮಾದರಿ ನಗರವಾಗಿ ಮೇಲ್ದರ್ಜೆಗೇರಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಗಳವಾರ ವಿಧಾನಸಭೆಗೆ ತಿಳಿಸಿದ್ದಾರೆ.

ಇಂದು ಪ್ರಶ್ನೋತ್ತರ ಅವಧಿಯಲ್ಲಿ ಕಾಂಗ್ರೆಸ್ ಶಾಸಕ ಕೆ.ಜೆ.ಜಾರ್ಜ್ ಅವರ ಪ್ರಶ್ನೆಗೆ ಉತ್ತರಿಸಿದ ಸಿಎಂ ಬೊಮ್ಮಾಯಿ, ಸ್ಮಾರ್ಟ್ ಸಿಟಿ ಅನುದಾನ ಮಾತ್ರವಲ್ಲದೆ, ನಗರೋತ್ಥಾನ ಯೋಜನೆ, ಬಿಬಿಎಂಪಿ ಹಾಗೂ ಇತರ ಇಲಾಖೆಗಳ ಅನುದಾನವನ್ನು ಬಳಸಿಕೊಂಡು ಅಗತ್ಯ ಮೂಲಸೌಕರ್ಯಗಳನ್ನು ಒದಗಿಸಲಾಗುತ್ತಿದೆ. ಅತ್ಯಾಧುನಿಕ ಸಿಗ್ನಲ್ ವ್ಯವಸ್ಥೆ, ಸುವ್ಯವಸ್ಥಿತ ಪಾರ್ಕಿಂಗ್ ಮಾತ್ರವಲ್ಲದೆ ಪೊಲೀಸರಿಗೆ ವಿಶೇಷ ಸಮವಸ್ತ್ರ ಸೇರಿದಂತೆ ಸಣ್ಣಪುಟ್ಟ ವಿಷಯಗಳ ಬಗ್ಗೆಯೂ ಗಮನ ಹರಿಸಲಾಗುತ್ತಿದೆ ಎಂದರು.

Edited By : Nagaraj Tulugeri
Kshetra Samachara

Kshetra Samachara

21/12/2021 05:49 pm

Cinque Terre

606

Cinque Terre

0

ಸಂಬಂಧಿತ ಸುದ್ದಿ