ಬೆಂಗಳೂರು : ಹಿಜಾಬ್ ವಿವಾದದ ಹಿನ್ನೆಲೆಯಲ್ಲಿ 1 ರಿಂದ 7 ನೇ ತರಗತಿ ಹೊರತುಪಡಿಸಿ ರಾಜ್ಯ ಸರ್ಕಾರ ಶಾಲಾ ಕಾಲೇಜುಗಳಿಗೆ 3 ದಿನ ರಜೆ ಘೋಷಿಸಿದೆ.
ಹೌದು ರಾಜ್ಯದಲ್ಲಿ ಹಿಜಾಬ್-ಕೇಸರಿ ವಿವಾದ ತಾರಕಕ್ಕೇರಿದ ಹಿನ್ನೆಲೆ ರಾಜ್ಯದ ಎಲ್ಲಾ ಶಾಲೆ-ಕಾಲೇಜುಗಳಿಗೆ ನಾಳೆಯಿಂದ 3 ದಿನ ರಜೆ ಘೋಷಿಸಿ ಸರ್ಕಾರ ಆದೇಶಿಸಿದೆ.
ನ್ಯಾಯಾಲಯದಲ್ಲಿ ಈ ಪ್ರಕರಣ ನಡೆಯುತ್ತಿರುವ ಹಿನ್ನೆಲೆಯಲ್ಲಿ ರಜೆ ಘೋಷಣೆ ಮಾಡಲಾಗಿದೆ. ವಿದ್ಯಾರ್ಥಿಗಳು ಶಾಂತಿ, ಸೌಹಾರ್ದತೆ ಕಾಪಾಡಬೇಕು ಎಂದು ಮನವಿ ಮಾಡಿದ್ದಾರೆ.
ಇನ್ನೂ ಖಾಸಗಿ ಹೈಸ್ಕೂಲ್ ನಲ್ಲಿ ಆನ್ ಲೈನ್ ತರಗತಿ ನಡೆಯಲಿದೆ. ಕಾಮ್ಸ್ ಸಂಘಟನೆ ಮಾಹಿತಿ ನೀಡಿದ್ದು, ಅನಿವಾರ್ಯ ಪರಿಸ್ಥಿತಿಯಿಂದಾಗಿ ಆನ್ ಲೈನ್ ಕ್ಲಾಸ್ ನಡೆಸಲಾಗುತ್ತದೆ ಎಂದು ತಿಳಿಸಿದೆ.
PublicNext
08/02/2022 08:03 pm