ಮಹದೇವಪುರ : ಮಹದೇವಪುರದ ಮಾರತ್ತಹಳ್ಳಿ ಬಳಿ ನಿರ್ಮಾಣವಾಗುತ್ತಿರುವ ರೈಲ್ವೆ ಓವರ್ ಬ್ರಿಡ್ಜ್ ಕಾಮಗಾರಿ ಪರಿಶೀಲಿಸಿದ ಶಾಸಕ ಅರವಿಂದ ಲಿಂಬಾವಳಿ ತ್ವರಿತ ಗತಿಯಲ್ಲಿ ಕಾಮಗಾರಿ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.
ರೈಲ್ವೆ ಅಂಡರ್ ಪಾಸ್ ಕಾಮಗಾರಿಯ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಲಾಯಿತು. ಈ ಸಂದರ್ಭದಲ್ಲಿ ಇಲಾಖೆ ಅಧಿಕಾರಿಗಳು, ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
PublicNext
19/04/2022 10:43 pm