ವರದಿ: ರಂಜಿತಾ ಸುನಿಲ್ ʼಪಬ್ಲಿಕ್ ನೆಕ್ಸ್ಟ್ʼ ಬೆಂಗಳೂರು
ಬೆಂಗಳೂರು: ಬೆಂಗಳೂರು ನಗರದಲ್ಲಿ ಜಾರಿಯಲ್ಲಿರುವ ಮೂಲಭೂತ ಸೌಕರ್ಯಗಳ ಕಾಮಗಾರಿಗಳಿಗೆ ವೇಗ ನೀಡಿ ಅವುಗಳ ಅನುಷ್ಠಾನವನ್ನು ತ್ವರಿತವಾಗಿ ಮಾಡಲು ತೀರ್ಮಾನಿಸಲಾಗಿದೆ.
ನಗರೋತ್ಥಾನ ಯೋಜನೆಯಡಿ ಬೆಂಗಳೂರಿನಲ್ಲಿ ಕೆಲಸಗಳು ಪ್ರಾರಂಭವಾಗಿವೆ. ಮಳೆಯಿಂದಾಗಿ ಕೆಲಸಕ್ಕೆ ತೊಂದರೆಯಾಗಿದ್ದು, ಈಗ ಪುನ: ಕಾಮಗಾರಿಗಳಿಗೆ ವೇಗ ನೀಡಲಾಗುತ್ತಿದೆ. ಸಬ್ ಅರ್ಬನ್ ರೈಲು ಯೋಜನೆಗಳಿಗೆ ಟೆಂಡರ್ ಪ್ರಕ್ರಿಯೆ ಆಗಿದ್ದು, ಕಾಮಗಾರಿ ಪ್ರಾರಂಭವಾಗುತ್ತದೆ. ಮೆಟ್ರೋ 2ನೇ ಹಂತದ ಕಾಮಗಾರಿ ಒಂದು ವರ್ಷ ಮುಂಚೆಯೇ ಮುಗಿಸಲು ಕ್ರಮಕೈಗೊಳ್ಳಲಾಗುತ್ತಿದೆ.
ಮುಖ್ಯ ಚರಂಡಿ ನಿರ್ಮಾಣ ಕಾರ್ಯಗಳಿಗೂ ಆದೇಶ ನೀಡಲಾಗಿದೆ. 75 ಪಾರ್ಕ್ ಮತ್ತು ಕೆರೆಗಳ ಅಭಿವೃದ್ಧಿಗೆ ಈಗಾಗಲೇ ಆದೇಶವನ್ನು ನೀಡಲಾಗಿದೆ. ಬೆಂಗಳೂರಿಗೆ ಹಲವು ಸೌಲಭ್ಯ ನೀಡಲು ಆಡಳಿತಾತ್ಮಕ ಅನುಮೋದನೆಗಳನ್ನು ನೀಡಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಮಾಧ್ಯಮದವರಿಗೆ ಪ್ರತಿಕ್ರಿಯಿಸಿದ್ದಾರೆ.
Kshetra Samachara
03/06/2022 10:26 am