ಹೊಸಕೋಟೆಯನ್ನು ಸ್ಯಾಟಲೈಟ್ ಟೌನ್ ಆಗಿ ಅಭಿವೃದ್ಧಿಗೊಳಿಸೊ ಚಿಂತನೆ ಇದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.ಇಂದು ಹೊಸಕೋಟೆ ವಿಧಾನಸಭಾ ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ, ಸವಲತ್ತುಗಳನ್ನು ವಿತರಿಸಿ ಮಾತನಾಡಿದರು.
ಹೊಸಕೋಟೆಯಲ್ಲಿ ಆರ್ಥಿಕ ಚಟುವಟಿಕೆಗಳಿಗೆ ವಿಫುಲ ಅವಕಾಶಗಳಿವೆ. ಕೈಗಾರಿಕೆ, ಉಗ್ರಾಣ ಸೌಲಭ್ಯ, ಕುಡಿಯುವ ನೀರು, ವಿದ್ಯುತ್, ಸ್ವಚ್ಛತೆ, ಸಾರಿಗೆ ವ್ಯವಸ್ಥೆ ಕಲ್ಪಿಸಿ ಅಭಿವೃದ್ಧಿಗೊಳಿಸಲು ವಿಶೇಷ ಗಮನ ನೀಡಲಾಗುವುದು ಎಂದರು. ಮೆಟ್ರೋ ಅಥವಾ ಸಬ್ ಅರ್ಬನ್ ಕಾಮಗಾರಿಗಳನ್ನು ಮುಂದಿನ ಯೋಜನೆಗಳಲ್ಲಿ ಸೇರ್ಪಡೆಗೊಳಿಸಲಾಗುವುದು ಎಂದು ತಿಳಿಸಿದರು.
ಎತ್ತಿನ ಹೊಳೆ ಯೋಜನೆ ಪೂರ್ಣಗೊಳಿಸುವ ಜವಾಬ್ದಾರಿ ನಮ್ಮದು. ಎತ್ತಿನಹೊಳೆ ಯೋಜನೆ 2012ರಲ್ಲಿ ಕೋಲಾರ, ಚಿಕ್ಕಬಳ್ಳಾಪುರ & ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಗೆ ಕುಡಿಯುವ ನೀರಿನ ಕೊರತೆ ನೀಗಿಸುವ ಸಲುವಾಗಿ ರೂಪುಗೊಂಡಿದೆ. ಎತ್ತಿನಹೊಳೆ ಯೋಜನೆ ಪೂರ್ಣಗೊಳಿಸುವ ಜವಾಬ್ದಾರಿ ನಮ್ಮದು. ಭೂಸ್ವಾಧೀನ ಕಾರ್ಯಕ್ಕೆ ಹಣವನ್ನು ಬಿಡುಗಡೆ ಮಾಡಲಾಗಿದೆ. ಈ ಪ್ರಕ್ರಿಯೆ ಮುಗಿದ ಕೂಡಲೇ ಕಾಮಗಾರಿ ತ್ವರಿತಗೊಳಿಸಿ ಬಯಲು ಸೀಮೆಗೆ ನೀರನ್ನು ತರುವ ಕೆಲಸ ಮಾಡಲಾಗುವುದು. ಒಂದೂವರೆ ವರ್ಷದಲ್ಲಿ 24 ಟಿಎಂಸಿ ನೀರಿನ ಬಳಕೆ ಮಾಡಲು ಸಾಧ್ಯವಾಗಲಿದೆ. ಹೊಸಕೋಟೆಗೂ ಎತ್ತಿನಹೊಳೆ ನೀರು ತಲುಪಲಿದೆ ಎಂದರು.
ಈ ಬಾರಿ ಬಜೆಟ್‌ನಲ್ಲಿ ಎರೆಮಲ್ಲಪ್ಪನ ಕೆರೆ ಸಂಪೂರ್ಣ ಅಭಿವೃದ್ಧಿಗೆ ಬಜೆಟ್‌ನಲ್ಲಿ ಅನುದಾನ ಒದಗಿಸಲಾಗಿದೆ. ಹೊಸಕೋಟೆ ಕೆರೆ ತುಂಬಿಸೊ ಯೋಜನೆ ಹಾಗೂ ಕುಡಿಯುವ ನೀರಿನ ಯೋಜನೆಗಳಿಗೆ ಈ ವರ್ಷದಲ್ಲಿ ಮಂಜೂರಾತಿ ನೀಡಲಾಗುವುದು. ಆನಗೊಂಡನಹಳ್ಳಿ ಹೋಬಳಿಲಿ 39 ಕೆರೆಗೆನೀರು ತುಂಬುವ ಯೋಜನೆ ಕಾಮಗಾರಿ ನಡೆದಿದೆ. ಅದಕ್ಕಾಗಿ ಹೆಚ್ಚುವರಿ 50 ಕೋಟಿ ರೂ.ಗಳನ್ನು ಒದಗಿಸಲಾಗಿದೆ. ಆದಷ್ಟು ತ್ವರಿತವಾಗಿ ಕಾಮಗಾರಿ ಮುಗಿಸಲಾಗುವುದು. ಒಟ್ಟಾರೆ, ಸಮಗ್ರ ಅಭಿವೃದ್ಧಿಯತ್ತ ಹೊಸಕೋಟೆ ದಾಪುಗಾಲಾಕ್ತಿದೆ ಎಂದು ತಿಳಿಸಿದರು.
SureshBabu Public Next. ಹೊಸಕೋಟೆ..
PublicNext
07/06/2022 06:36 pm