ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಬೆಂಗಳೂರಿಗರಿಗೆ 40% ಕಮಿಷನ್ ಮೇಲ್ಸೇತುವೆ: ಸರ್ಕಾರದ ವಿರುದ್ಧ ಆಪ್ ಪ್ರತಿಭಟನೆ

ಬೆಂಗಳೂರು: ಶಿವಾನಂದ ವೃತ್ತದಲ್ಲಿ 39 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಿರುವ ಸ್ಟೀಲ್‌ ಬ್ರಿಡ್ಜ್‌ ಕಳಪೆ ಕಾಮಗಾರಿಯಿಂದ ಕೂಡಿದೆ ಎಂದು ಆರೋಪಿಸಿ ಆಮ್ ಆದ್ಮಿ ಪಕ್ಷ ಪ್ರತಿಭಟನೆ ನಡೆಸಿದೆ.

ಶಿವಾನಂದ ಮೇಲ್ಸೇತುವೆ ಬಳಿ ಆಮ್ ಆದ್ಮಿ ಪಕ್ಷದ ನೂರಾರು ಕಾರ್ಯಕರ್ತರು ಆಗಮಿಸಿ ಬೆಂಗಳೂರಿಗರಿಗೆ 40 % ಕಮಿಷನ್ ಮೇಲ್ಸೇತುವೆ ಎಂಬ ನಾಮ ಫಲಕವನ್ನು ಪ್ರದರ್ಶಿಸಿ ಪ್ರತಿಭಟನೆ ನಡೆಸಿದ್ರು. ಈ ವೇಳೆ ಪ್ರತಿಭಟನಾಕಾರರನ್ನು ಪೊಲೀಸರು ಬಂಧಿಸಿದ್ದಾರೆ.

ಪ್ರತಿಭಟನೆಯ ನೇತೃತ್ವವನ್ನು ವಹಿಸಿ ಮಾತನಾಡಿದ ಬೆಂಗಳೂರು ನಗರ ಅಧ್ಯಕ್ಷ ಮೋಹನ್ ದಾಸರಿ ಈ ಸ್ಟೀಲ್ ಮೇಲ್ಸೇತುವೆಯು 19 ಕೋಟಿಗೆ ಆರಂಭಗೊಂಡು, 7 ವರ್ಷಗಳ ನಂತರ 39 ಕೋಟಿ ವೆಚ್ಚ ಮಾಡಿಯೂ, ಅತ್ಯಂತ ಕಳಪೆ ಕಾಮಗಾರಿ ಮಾಡಿದ್ದಾರೆ. ಈ ಬಿಜೆಪಿ ಸರಕಾರ ಬೆಂಗಳೂರಿಗರ ತೆರಿಗೆ ಹಣವನ್ನು ಲೂಟಿ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ರು.

ಬೆಂಗಳೂರಿನಲ್ಲಿ ಇದೇ ರೀತಿಯ ಅನೇಕ ಕಾಮಗಾರಿಗಳನ್ನು ಬಿಜೆಪಿ ಸರ್ಕಾರವು 3 ಮತ್ತು 4 ಪಟ್ಟು ಹೆಚ್ಚಿಸಿ ಸಮಯ ವ್ಯರ್ಥ ಮಾಡುತ್ತಿದೆ. 40% ಕಮಿಷನ್ ದಂಧೆಯಲ್ಲಿ ಮುಳುಗಿರುವ ಬಿಜೆಪಿಗೆ ಜನರು ಮುಂದಿನ ದಿನಗಳಲ್ಲಿ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಮೋಹನ್ ದಾಸ್ ಎಚ್ಚರಿಸಿದಾರೆ.

ಪ್ರತಿಭಟನೆಯಲ್ಲಿ ಪಕ್ಷದ ಉಪಾಧ್ಯಕ್ಷ ವಿಜಯ್ ಶರ್ಮಾ, ಮುಖಂಡರುಗಳಾದ ಜಗದೀಶ್ ವಿ. ಸುರೇಶ್ ರಾಥೋಡ್, ಚನ್ನಪ್ಪಗೌಡ ನಲ್ಲೂರು,ಶಾಶಾವಲಿ, ಉಷಾ ಮೋಹನ್, ಸುಹಾಸಿನಿ ಪಣಿರಾಜ್ ,ಗೋಪಿನಾಥ್ ಸೇರಿದಂತೆ ಅನೇಕ ಕಾರ್ಯಕರ್ತರುಗಳು ಉಪಸ್ಥಿತರಿದ್ದರು.

Edited By :
PublicNext

PublicNext

29/08/2022 06:46 pm

Cinque Terre

42.81 K

Cinque Terre

0

ಸಂಬಂಧಿತ ಸುದ್ದಿ