ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಕರಾಳೋತ್ಸವಕ್ಕೆ ಮುಂದಾದ ಪ್ರತಿಭಟನಾಕಾರರನ್ನ ವಶಕ್ಕೆ ಪಡೆದ ಪೊಲೀಸರು

ದೊಡ್ಡಬಳ್ಳಾಪುರ: ಬಿಜೆಪಿ ರಾಜ್ಯ ಸರ್ಕಾರದ ಜನಸ್ಪಂದನ ಕಾರ್ಯಕ್ರಮದ ವಿರುದ್ಧ ಕರಾಳೋತ್ಸವ ಆಚರಣೆ ಮಾಡಲು ಮುಂದಾದ 45ಕ್ಕೆ ಹೆಚ್ಚು ಕಾರ್ಯಕರ್ತರನ್ನ ಪೊಲೀಸರು ವಶಕ್ಕೆ ಪಡೆದರು.

ಬಿಜೆಪಿ ರಾಜ್ಯ ಸರ್ಕಾರ 3 ವರ್ಷಗಳ ಸಾಧನಾ ಸಮಾವೇಶವಾಗಿ ದೊಡ್ಡಬಳ್ಳಾಪುರದಲ್ಲಿ ಇಂದು ಜನಸ್ಪಂದನ ಕಾರ್ಯಕ್ರಮ ಅಯೋಜನೆ ಮಾಡಿದೆ, ಆದರೆ ದೊಡ್ಡಬಳ್ಳಾಪುರ ಜಿಲ್ಲಾ ಕೇಂದ್ರ ಘೋಷಣೆ ಮಾಡುವಂತೆ ಒತ್ತಾಯಿಸಿ ಜಿಲ್ಲಾ ಕೇಂದ್ರ ಹೋರಾಟ ಸಮಿತಿ ಹೋರಾಟಕ್ಕೆ ಮುಂದಾಗಿದೆ. ಇಂದು ನಡೆಯುತ್ತಿರುವ ಜನಸ್ಪಂದನ ಕಾರ್ಯಕ್ರಮದ ವಿರುದ್ಧ ಕರಾಳೋತ್ಸವ ಆಚರಣೆಗೆ ಕರೆ ನೀಡಿದ್ದಾರೆ.

ಕರಾಳೋತ್ಸವ ಅಂಗವಾಗಿ ಇಂದು ನಗರದ ಕನ್ನಡ ಜಾಗೃತ ಭವನದಿಂದ ಜಗದೀಶ್ ವೃತ್ತದವರೆಗೂ ಜಾಥಾ ನಡೆಸಲು ಪ್ರತಿಭಟನಾಕಾರರು ಮುಂದಾಗಿದ್ರು, ಮುಂಜಾಗೃತಾ ಕ್ರಮವಾಗಿ ಕರಾಳೋತ್ಸವಕ್ಕೆ ಮುಂದಾಗಿದ್ದ ಪ್ರತಿಭಟನಕಾರರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡರು.ಸುಮಾರು 45ಕ್ಕೂ ಹೆಚ್ಚು ಜನರನ್ನ ವಶಕ್ಕೆ ತೆಗೆದು ಬೇರೆ ಸ್ಥಳಕ್ಕೆ ಸ್ಥಳಾಂತರಿಸಿದರು.

Edited By :
Kshetra Samachara

Kshetra Samachara

10/09/2022 04:16 pm

Cinque Terre

2.57 K

Cinque Terre

0

ಸಂಬಂಧಿತ ಸುದ್ದಿ