ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ರೈತ ಮುಖಂಡ ರಾಕೇಶ್ ಟಿಕಾಯತ್ ಮೇಲೆ ಮಸಿ ಬಳಿದ ಕಿಡಿಗೇಡಿಗಳು

ವರದಿ ಗಣೇಶ್ ಹೆಗಡೆ

ಬೆಂಗಳೂರು: ಬೆಂಗಳೂರಿನ ಗಾಂಧಿ ಭವನದಲ್ಲಿ ನಡೆಯುತ್ತಿದ್ದ ರೈತ ಚಳವಳಿ ಬಗ್ಗೆ ಆತ್ಮಾವಲೋಕನ ಸಭೆಯಲ್ಲಿ ರೈತ ಮುಖಂಡರಾದ ರಾಕೇಶ್ ಟಿಕಾಯತ್ ಮತ್ತು ಯುಧ್ವೀರ್ ಸಿಂಗ್ ಮೇಲೆ ಕಿಡಿಗೇಡಿಗಳು ಮಸಿ ಎರಚಿ, ಹಲ್ಲೆಗೆ ಯತ್ನಿಸಿದ್ದಾರೆ.

ಪ್ರಕರಣ ಸಂಬಂಧ ಮೂವರು‌ ಕಿಡಿಗೇಡಿಗಳನ್ನು ಹಿಡಿದು ಹೈಗ್ರೌಂಡ್ಸ್ ಪೊಲೀಸರಿಗೆ ಒಪ್ಪಿಸಲಾಗಿದೆ. ವಿಚಾರಣೆ ವೇಳೆ ಆರೋಪಿಗಳು ಭರತ್ ಶೆಟ್ಟಿ, ಪ್ರತಾಪ್, ಶಿವಕುಮಾರ್ ಎಂದು ಗೊತ್ತಾಗಿದ್ದು, ಕರವೇ ಕಾರ್ಯಕರ್ತರು ಎಂದು ಹೇಳಲಾಗುತ್ತಿದೆ. ಆದರೆ ಈ ಬಗ್ಗೆ ಯಾವುದೇ ಸ್ಪಷ್ಟನೆ ಇನ್ನೂ ಪೊಲೀಸರು ನೀಡಿಲ್ಲವಾದರೂ ಹೆಚ್ಚಿನ ವಿಚಾರಣೆಗೊಳಪಡಿಸಿದ್ದಾರೆ.

ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಮೇಲೆ‌ ಇತ್ತೀಚೆಗೆ ಭ್ರಷ್ಟಾಚಾರ ಆರೋಪ ಕೇಳಿ ಬಂದಿತ್ತು‌. ಜೊತೆಗೆ ರಾಷ್ಟ್ರೀಯ ಕಿಸಾನ್ ಮೋರ್ಚಾ ಅಧ್ಯಕ್ಷ ರಾಕೇಶ್ ಟಿಕಾಯಿತ್, ರೈತ ಮುಖಂಡ ಯದುವೀರ್ ಸಿಂಗ್ ಸೇರಿದಂತೆ ರಾಷ್ಟ್ರೀಯ ರೈತ ಮುಖಂಡರ ಮೇಲೆ ಆಪಾದನೆಗಳು ಕೇಳಿ ಬಂದಿತ್ತು. ಇದು ರಾಜ್ಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿತ್ತು. ಆಪಾದನೆ ಕೇಳಿ ಬರುತ್ತಿದ್ದಂತೆ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಬೆಂಗಳೂರಿನ ಗಾಂಧಿಭವನದಲ್ಲಿ ರೈತ ಚಳವಳಿ-ಆತ್ಮಾವಲೋಕನ ಹಾಗೂ ಸ್ಪಷ್ಟೀಕರಣ ಸಭೆ ಹಮ್ಮಿಕೊಂಡಿತ್ತು.

ವೈರಲ್ ಆದ ಆಡಿಯೋ ಸಂಭಾಷಣೆಯಲ್ಲಿ ನನ್ನ ಹೆಸರು ತಳಕು ಹಾಕಿಕೊಂಡಿದೆ.‌ ಹಣದ ವಿಚಾರವಾಗಿ ಯಾವೊಬ್ಬ ರೈತ ಮುಖಂಡನ ಜೊತೆಯಲ್ಲಿಯೂ ನಾನು ಮಾತನಾಡಿಲ್ಲ ಎಂದು ಹೇಳುತ್ತಿದ್ದಂತೆ, ಪತ್ರಕರ್ತರ ಸೋಗಿನಲ್ಲಿದ್ದ ಮೂವರು‌ ಕಿಡಿಗೇಡಿಗಳು ಏಕಾಏಕಿ ವೇದಿಕೆ ಮೇಲೆ ಹತ್ತಿ ರಾಷ್ಟ್ರೀಯ ರೈತ ಮುಖಂಡ ರಾಕೇಶ್ ಟಿಕಾಯಿತ್, ಯದುವೀರ್ ಸಿಂಗ್ ಮೇಲೆ ಕಪ್ಪು‌ ಮಸಿ ಎರಚಿದ್ದಾರೆ.

Edited By :
PublicNext

PublicNext

30/05/2022 06:55 pm

Cinque Terre

26.28 K

Cinque Terre

3

ಸಂಬಂಧಿತ ಸುದ್ದಿ