ಬೆಂಗಳೂರು: ವಿಶ್ವ ವಿದ್ಯಾಲಯದಲ್ಲಿ ಅಕ್ರಮವಾಗಿ ದೇವಸ್ಥಾನ ನಿರ್ಮಾಣ ಮಾಡಲಾಗುತ್ತಿದೆ. ಜ್ಞಾನಭಾರತಿ ಪೊಲೀಸ್ ಠಾಣೆ ಎದುರುಗಡೆ ವಿ.ವಿ ಆಡಳಿತ ಕಚೇರಿ ಹಿಂಭಾಗದಲ್ಲಿ ಅನಧಿಕೃತವಾಗಿ ನಿರ್ಮಿಸುತ್ತಿರುವ ಧಾರ್ಮಿಕ ಕಟ್ಟಡದ ಕಾಮಗಾರಿ ನಿಲ್ಲಿಸಿ ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನೀತಿ ನಿಯಮಗಳ ಮತ್ತು ಸರ್ವೋಚ್ಚ ಉಚ್ಚ ನ್ಯಾಯಾಲಯಕ್ಕೆ ಸಲ್ಲಿಸಿರುವ ಅಫಿಡೆವಿಟ್ 2022ರಂತೆ, ಸಾರ್ವಜನಿಕ ಶಿಕ್ಷಣ ಸಂಸ್ಥೆಗಳ ವ್ಯಾಪ್ತಿಯಲ್ಲಿ ಧಾರ್ಮಿಕ ಕೇಂದ್ರ ಅಥವಾ ಕಟ್ಟಡಗಳ ನಿರ್ಮಾಣಕ್ಕೆ ಅವಕಾಶವಿಲ್ಲ. ಆದರೆ ಅತಿಕ್ರಮಣ ಕಾನೂನು ಬಾಹಿರವಾಗಿ ಕಟ್ಟಡ ನಿರ್ಮಿಸುತ್ತಿರುವುದನ್ನು ವಿರೋಧಿಸಿ ವಿದ್ಯಾರ್ಥಿಗಳು ಹೋರಾಟಕ್ಕಿಳಿದ್ದಾರೆ.
ಇನ್ನು ವಿದ್ಯಾರ್ಥಿಗಳಿಗೆ ಇರುವ ಆಸೆ ಅಲ್ಲಿನ ಪ್ರೊಫೆಸರ್‌ಗೆ ಆಗಲಿ ಆಡಳಿತ ಮಂಡಳಿಗಾಗಲಿ ಯಾಕಿಲ್ಲ ಕಾಳಜಿ. ಹೇಳೋರಿಲ್ಲ, ಕೇಳೋರಿಲ್ಲದಂತಾಗಿ ಬೆಂಗಳೂರು ವಿಶ್ವವಿದ್ಯಾಲಯದ ಅಥವಾ ಇದರ ಹಿಂದೆ ಆಡಳಿತ ಮಂಡಳಿಯವರದ್ದೇನಾದ್ರು ಕೈವಾಡ ಇದ್ಯಾ ಅನ್ನೋದು ತನಿಖೆಯಲ್ಲಿ ತಿಳಿದು ಬರಬೇಕಿದೆ.
ರಿಪೋರ್ಟ್- ರಂಜಿತಾಸುನಿಲ್..
PublicNext
07/09/2022 09:51 pm