ಜೆಜೆ ನಗರ ಚಂದ್ರು ಕೊಲೆ ಕೇಸ್ ನಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಕೊಟ್ಟ ಹೇಳಿಕೆ ವಿರೋಧಿಸಿ ಇಂದು ಯೂತ್ ಕಾಂಗ್ರೆಸ್ ಪ್ರತಿಭಟನೆ ಹಮ್ಮಿಕೊಂಡಿತ್ತು. "ಜಾತಿ-ಧರ್ಮಗಳ ನಡುವೆ ಕೋಮು ಗಲಭೆ ಸೃಷ್ಟಿಸುವ ನಿಟ್ಟಿನಲ್ಲಿ ಪ್ರಚೋದನಾಕಾರಿ ಹೇಳಿಕೆಯನ್ನು ನೀಡಿರುತ್ತಾರೆ ಎಂದು ಯೂಥ್ ಕಾಂಗ್ರೆಸ್ ಅಧ್ಯಕ್ಷ ಮಹಮ್ಮದ್ ನಲಪಾಡ್ ಅಧ್ಯಕ್ಷತೆಯಲ್ಲಿ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ಹಮ್ಮಿಕೊಂಡಿದ್ರು. ಆದ್ರೆ ಪೊಲೀಸರು ಇದಕ್ಕೆ ಅನುಮತಿ ನೀಡದೆ ಯೂತ್ ಕಾಂಗ್ರೆಸ್ ಅಧ್ಯಕ್ಷ ನಲಪಾಡ್ ಸೇರಿದಂತೆ ಹಲವು ಕಾರ್ಯಕರ್ತರನ್ನ ಯೂತ್ ಕಾಂಗ್ರೆಸ್ ಕಚೇರಿ ಬಳಿಯೇ ವಶಕ್ಕೆ ಪಡೆದಿದ್ದಾರೆ.
ಸಚಿವರಿಗೆ ಧಿಕ್ಕಾರ ಕೂಗುತ್ತಾ ಕಾರ್ಯಕರ್ತರು ಕಚೇರಿ ಬಳಿಯೇ ಪ್ರತಿಭಟಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
PublicNext
07/04/2022 04:58 pm