ವರದಿ - ಗಣೇಶ ಹೆಗಡೆ
ಬೆಂಗಳೂರು: ಕೆಲವೇ ತಿಂಗಳಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆ ನಡೆಸಲು ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ.
ಇಂದು ನಡೆದ ವಿಚಾರಣೆಯಲ್ಲಿ ಕ್ಷೇತ್ರ ಮರು ವಿಂಗಡಣೆ, ಮೀಸಲಾತಿ ಹಂಚಿಕೆ, ಪ್ರಕ್ರಿಯೆ 8 ವಾರ ದಲ್ಲಿ ಪೂರ್ಣಗೊಳಿಸುವಂತೆ ಸೂಚನೆ ನೀಡಿದೆ.
ರಾಜ್ಯ ಸರ್ಕಾರ ರಚನೆ ಮಾಡಿದ ಮರು ವಿಂಗಡಣನಾ ಆಯೋಗಕ್ಕೆ ಸುಪ್ರೀಂ ಕೋರ್ಟ್ 8 ವಾರಾಗಳ ಕಾಲಾವಕಾಶ ನೀಡಿದ್ದು, ನಂತರ ಚುನಾವಣೆ ನಡೆಸುವ ಪ್ರಕ್ರಿಯೆಯನ್ನು ರಾಜ್ಯ ಚುನಾವಣಾ ಆಯೋಗ ಶುರು ಮಾಡಬೇಕು ಎಂದು ಸರ್ವೋಚ್ಛ ನ್ಯಾಯಾಲಯ ಹೇಳಿದೆ.
ಕರ್ನಾಟಕ ಮುನ್ಸಿಪಲ್ ಕಾರ್ಪೊರೇಶನ್ ತಿದ್ದುಪಡಿ ಕಾಯ್ದೆ ಅನುಸಾರ ಮರು ವಿಂಗಡಣಾ ಆಯೋಗವನ್ನು ರಾಜ್ಯ ಸರ್ಕಾರ ರಚನೆ ಮಾಡಿತ್ತು.
ಇನ್ನೂ ಒಬಿಸಿ ಮೀಸಲಾತಿ ಕೂಡಾ 8 ವಾರಗಳಲ್ಲಿ ಪೂರ್ಣಗೊಳಿಸಬೇಕು. ನಂತರ ರಾಜ್ಯ ಸರ್ಕಾರ ಈ ಪ್ರಕ್ರಿಯೆ ಪೂರ್ಣಗೊಳಿಸಿದ ನೋಟಿಫಿಕೇಷನ್ ಹೊರಡಿಸಬೇಕು.
ಚುನಾವಣಾ ಆಯೋಗ ಸಾಂವಿಧಾನಿಕ ಸಂಸ್ಥೆಯಾಗಿದ್ದು, ಎಲ್ಲಾ ಪರಿಸ್ಥಿತಿ ಅವಲೋಕಿಸಿ ಚುನಾವಣೆಗೆ ಬಗ್ಗೆ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿ ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ಹೀಗಾಗಿ ಶೀಘ್ರದಲ್ಲಿ ಬಿಬಿಎಂಪಿ ಚುನಾವಣೆ ನಡೆಯಲಿದೆ. ಆ ಬಗ್ಗೆ ಕೋರ್ಟ್ ನಲ್ಲೂ ಕೂಡಾ ರಾಜ್ಯ ಸರ್ಕಾರದ ಪರ ಕೇಂದ್ರದ ಸಾಲಿಟರಿ ಜನರಲ್ ತುಷಾರ್ ಮೆಹ್ತಾ ಭರವಸೆ ನೀಡಿದ್ದಾರೆ.
PublicNext
20/05/2022 01:20 pm