ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬಿಜೆಪಿಯಲ್ಲಿ ಭಿನ್ನಮತ ಸ್ಫೋಟ: ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ...!

ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಯೋಜನಾ ಪ್ರಾಧಿಕಾರದ ಅಧ್ಯಕ್ಷರಾಗಿ ಶಿವಪ್ಪ ಅವರು ಕರ್ನಾಟಕ ಸರ್ಕಾರ ಆಯ್ಕೆ ಮಾಡಲಾಗಿತ್ತು. ಇನ್ನೇನು ಅಧಿಕಾರ ಸ್ವೀಕಾರ ಮಾಡುವ ಹೊತ್ತಿಗೆ ಅಧ್ಯಕ್ಷ ಸ್ಥಾನವನ್ನು ಯೋಜನಾ ಪ್ರಾಧಿಕಾರದಿಂದ ಹಿಂಪಡೆಯಲಾಗಿದೆ.

ಇದರಿಂದ ಸಾಮಾಜಿಕ ಜಾಲತಾಣದಲ್ಲಿ ಶಿವಪ್ಪನ ಬೆಂಬಲಿಗರು ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ.. ಇನ್ನು ಬಿಜೆಪಿ ಆಪ್ತ ವಲಯದಲ್ಲಿ ಶಿವಪ್ಪ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದರು, ಆದರೆ ಅಧಿಕಾರವನ್ನ ಸ್ವೀಕಾರ ಮಾಡುವಷ್ಟರಲ್ಲಿ ಸರ್ಕಾರ ಹಿಂಪಡೆದುಕೊಂಡಿದೆ ಇದರಿಂದ ಬಿಜೆಪಿಯಲ್ಲಿ ಭಿನ್ನಮತ ಕಾಣಿಸಿಕೊಂಡಿದ್ದು ರಾಜ್ಯಸರ್ಕಾರಕ್ಕೆ ನಡೆಗೆ ಮುಖಂಡರಿಗೆ ಇರಿಸುಮುರುಸು ಉಂಟಾಗಿದೆ. ಇನ್ನು ಹಿಂದೆ ಇದ್ದ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಜಯಣ್ಣ ಮುಂದುವರೆಯಲಿದ್ದಾರೆ ಎಂದು ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.

Edited By : PublicNext Desk
Kshetra Samachara

Kshetra Samachara

16/06/2022 05:15 pm

Cinque Terre

1.27 K

Cinque Terre

0

ಸಂಬಂಧಿತ ಸುದ್ದಿ