ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರಾಜ್ಯ ಸರ್ಕಾರ 40% ಕಮಿಷನ್ ದಂಧೆ: ಮಾಹಿತಿ ಕಲೆಹಾಕಲು ಮುಂದಾದ ಕೇಂದ್ರ ಸರ್ಕಾರ

ಬೆಂಗಳೂರು: ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ 40 ಪರ್ಸಂಟ್ ಕಮಿಷನ್ ದಾಖಲೆಗಳನ್ನು ಕೇಂದ್ರ ಗೃಹ ಸಚಿವಾಲಯ ರಹಸ್ಯವಾಗಿ ಕಲೆ ಹಾಕುತ್ತಿದೆ. ಈ ಸಂಬಂಧ ಕಳೆದ ಶುಕ್ರವಾರ ಗುತ್ತಿಗೆದಾರರ ಸಂಘ ಅಧ್ಯಕ್ಷ ಕೆಂಪಣ್ಣ ರವರನ್ನು ಸಂಪರ್ಕಿಸಿದ್ದಾರೆ ಎನ್ನಲಾಗಿದೆ.

ಈ ಬಗ್ಗೆ ಮಾಧ್ಯಮಗಳಲ್ಲಿ‌ ಮಾಹಿತಿ ಬಹಿರಂಗವಾಗುತ್ತಿದ್ದಂತೆ ಮುಂದಿನವಾರ ದಾಖಲೆ ಕಲೆ ಹಾಕುವುದಾಗಿ ಕೆಂಪಣ್ಣರವರಿಗೆ ಕೇಂದ್ರ ಗೃಹ ಇಲಾಖೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ ಎಂದು‌ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ತಿಳಿಸಿದ್ದಾರೆ.

ಇನ್ನೂ ಕೇಂದ್ರ ಗೃಹ ಇಲಾಖೆಗೆ ತಮ್ಮಲ್ಲಿರುವ ದಾಖಲೆಗಳನ್ನು ಸಲ್ಲಿಸಲು ಗುತ್ತಿಗೆದಾರ ಸಂಘ ತಯಾರಿ ನಡೆಸಿದೆ. ಅಲ್ಲದೆ ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ರವರ ಕಾರ್ಯಾಲಯಕ್ಕೆ ಪತ್ರ ಬರೆಯಲು ಮುಂದಾಗಿದೆ. ಅಲ್ಲದೆ ರಾಜ್ಯದ ಸಿಎಂ ಬೊಮ್ಮಾಯಿ ರವರನ್ನು ಭೇಟಿಗೆ ನಿರ್ಧರಿಸಿದ್ದು, ಬಿಜೆಪಿ ಪಾಳಯದಲ್ಲಿ ನಡುಕ ಶುರುವಾಗಿದೆ.

ವರದಿ - ಗಣೇಶ್ ಹೆಗಡೆ

Edited By : Somashekar
Kshetra Samachara

Kshetra Samachara

28/06/2022 06:36 pm

Cinque Terre

4.41 K

Cinque Terre

0

ಸಂಬಂಧಿತ ಸುದ್ದಿ